ಬಂಟ್ವಾಳದ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ: ಮೂವರು ಅರೆಸ್ಟ್-ಕಹಳೆ ನ್ಯೂಸ್
ಮಂಗಳೂರು: ಬಂಟ್ವಾಳದ ಫರಂಗಿಪೇಟೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡ, ಫೋಟೋಗ್ರಾಫರ್ ಮೇಲೆ ತಲವಾರಿನಿಂದ ದಾಳಿ ನಡೆಸಿದ ಮೂವರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುಹಮ್ಮದ್ ಅರ್ಷದ್, ಅಬ್ದುಲ್ ರೆಹಮಾನ್, ಮುಹಮ್ಮದ್ ಸೈಫುದ್ದೀನ್ ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಫರಂಗಿಪೇಟೆಯಲ್ಲಿನ ದಿನೇಶ್ ರವರ ತೃಷಾ ಫೋಟೊ ಸ್ಟುಡಿಯೋಕ್ಕೆ 4 ಜನ ಯುವಕರು ಫೋಟೋ ತೆಗೆಸುವಂತೆ ಬಂದು ಫೋಟೋಗ್ರಾಫರ್, ಸ್ಥಳೀಯ ಬಿಜೆಪಿ ಮುಖಂಡ ದಿನೇಶ್ ಅವರಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು ಇತ್ತೀಚೆಗೆ...







