Thursday, July 23, 2026

ಬಂಟ್ವಾಳ

ಬಂಟ್ವಾಳ

ಬಂಟ್ವಾಳ ತಾಲೂಕಿನಲ್ಲಿ ಇಂದು ಗ್ರಾಮ‌ ಪಂಚಾಯತ್ ಚುನಾವಣಾ ಮತದಾನಕ್ಕೆ ಕ್ಷಣಗಣನೆ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತ್ ಗಳಲ್ಲಿ‌ ಇಂದು ನಡೆಯುವ ಮತದಾನಕ್ಕೆ ತಾಲೂಕಾಡಳಿತ ಸಿದ್ದಗೊಂಡಿದೆ. ಈಗಾಗಲೇ 396 ಮತಗಟ್ಟೆಗಳಿಗೆ ಮತಪೆಟ್ಟಿಗೆಗಳು ಮತ್ತು ಬ್ಯಾಲೆಟ್ ಪೇಪರ್ ಗಳೂ ಸಿದ್ದವಾಗಿದ್ದು, ಮತದಾರರು ಬಂದು ತಮ್ಮ ಹಕ್ಕು ಚಲಾಯಿಸುವುದಕ್ಕೆ ಕ್ಷಣಗಣನೆ ಆರಂಭವಾಗಿದೆ . ಹಾಗೆಯೇ ಬೆಳಿಗ್ಗೆ 7ಗಂಟೆಯಿಂದ 5 ಗಂಟೆಯವರೆಗೆ ಚುನಾವಣೆ ನಡೆಯಲಿದೆ. ಮತಗಟ್ಟೆ ಅಧಿಕಾರಿಗಳಿಗೆ ಬೇಕಾಗುವ ಚುನಾವಣಾ ಸಾಮಾಗ್ರಿಗಳನ್ನು ಹಂಚಿಕೆ ಮಾಡಲಾಗಿದೆ. ಹಾಗೆಯೇ ಗ್ರಾಮ ಪಂಚಾಯತಿ ಚುನಾವಣೆಗೆ ತಮ್ಮ ಅಮೂಲ್ಯವಾದ ಮತವನ್ನು...
ಬಂಟ್ವಾಳ

ಮೇಲ್ಕಾರ್ ನಲ್ಲಿ ಇಂದು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಮೆಲ್ಕಾರ್ ಜಂಕ್ಷನ್‌ನಲ್ಲಿ ಮೆಲ್ಕಾರ್ ರಿಕ್ಷಾ ಚಾಲಕರು ,ಮಾಲಕರು ಸಂಘದ ಸಹಕಾರದೊಂದಿಗೆ ಎಸ್ಸೆಸ್ಸಫ್ ಬಂಟ್ವಾಳ ಡಿವಿಷನ್ ಸಮಿತಿ ಕೊಡುಗೆ ಮಾಡಿದಂತಹ ಶುದ್ಧ ಕುಡಿಯುವ ನೀರಿನ ವಾಟರ್ ಕೂಲರ್ ಇಂದಿನಿಂದ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಮೆಲ್ಕಾರ್ ಜಂಕ್ಷನ್’ನಲ್ಲಿ ಸರಳ ರೀತಿಯ ಉದ್ಘಾಟನಾ ಕಾರ್ಯಾಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಫ್ ಬಂಟ್ವಾಳ ಡಿವಿಷನ್ ನಾಯಕರು, ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರುಗಳು, ಸ್ಥಳೀಯ ಕೌನ್ಸಿಲರ್’ಗಳು...
ಬಂಟ್ವಾಳ

ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಮದ್ಯದಂಗಡಿ ಬಂದ್ – ಕಹಳೆ ನ್ಯೂಸ್

ಬಂಟ್ವಾಳ: 2020 ಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್‍ಗಳ ಸಾರ್ವತ್ರಿಕ ಚುನಾವಣೆ ಜಿಲ್ಲೆಯ ಮಂಗಳೂರು, ಮೂಡುಬಿದ್ರೆ ಹಾಗೂ ಬಂಟ್ವಾಳ ತಾಲೂಕುಗಳಲ್ಲಿ ಡಿಸೆಂಬರ್ 20 ರಂದು ಸಂಜೆ 5 ಗಂಟೆಯಿಂದ ಡಿಸೆಂಬರ್ 22 ರಂದು ಮಧ್ಯರಾತ್ರಿ 12 ಗಂಟೆಯವರಗೆ , ಮತ್ತು ಡಿಸೆಂಬರ್ 25 ರಂದು ಸಂಜೆ 5 ಗಂಟೆಯಿಂದ, 27 ರಂದು ಮಧ್ಯರಾತ್ರಿ 12 ಗಂಟೆವರೆಗೆ ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ...
ಬಂಟ್ವಾಳ

ಬಂಟ್ವಾಳದ ವಗ್ಗದಲ್ಲಿ ಚುನಾವಣೆ ಬಹಿಷ್ಕಾರ ಮಾಡಲು ಮುಂದಾದ ಗ್ರಾಮಸ್ಥರು-ಕಹಳೆ ನ್ಯೂಸ್

ಬಂಟ್ವಾಳ: ರಾಜ್ಯದ ಹಲವೆಡೆ ಗ್ರಾಮ‌ ಪಂಚಾಯತ್ ಚುನಾವಣೆಗಳನ್ನು ಬಹಿಷ್ಕಾರ ಮಾಡುತ್ತಿರುವ ಸುದ್ಧಿ ಕೇಳಿಬರುತ್ತಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗ್ರಾಮವೊಂದರಲ್ಲಿ ಕೂಡ ಚುನಾವಣಾ ಬಹಿಷ್ಕಾರ ಬ್ಯಾನರ್ ಕಂಡು ಬಂದಿದೆ. ಈ ಚುನಾವಣೆ ಬಹಿಷ್ಕಾರ ಮಾಡುವ ನಿರ್ಧಾರವನ್ನು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮ‌ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ವಗ್ಗದ ಗ್ರಾಮಸ್ಥರು ಕೈಗೊಂಡಿದ್ದಾರೆ. ತಲೆ ತಲಾಂತರಗಳಿಂದ ಸುಮಾರು 12 ರಷ್ಟು ಮನೆಗಳಿಗೆ ಸಂಪರ್ಕಿಸುತ್ತಿದ್ದ ದಾರಿಗೆ ಅಡ್ಡಲಾಗಿ ಮಾಜಿ‌ ಪಂಚಾಯತ್ ಉಪಾಧ್ಯಕ್ಷರು ತಡೆಗೋಡೆ...
ಬಂಟ್ವಾಳ

ಬಂಟ್ವಾಳ ತಾಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಇದೇ 20 ರಂದು ವಾರ್ಷಿಕ ಷಷ್ಠಿ ಮಹೋತ್ಸವ ಸಂಭ್ರಮ- ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಇದೇ 20 ರಂದು ಸಂಭ್ರಮ ಸಡಗರದಿಂದ ನಡೆಯಲಿದೆ. ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯ ತಂತ್ರಿ ಮಾರ್ಗದರ್ಶನದಲ್ಲಿ ಇದೇ 18 ರಿಂದ ವಿವಿಧ ಧಾರ್ಮಿಕ ವಿಧಿ ವಿಧಾನ ಆರಂಭಗೊಂಡು. ಡಿಸೆಂಬರ್ 19 ರಂದು ಬೆಳಿಗ್ಗೆ 9 ಗಂಟೆಗೆ ಬ್ರಹ್ಮಲಿಂಗೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ, ಮತ್ತು ಮಧ್ಯಾಹ್ನ ಮಹಾಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಮತ್ತು...
ಬಂಟ್ವಾಳ

ವಿಟ್ಲದಲ್ಲಿ ಮೆಸ್ಕಾಂ ನೀತಿ ವಿರೋಧಿಸಿ ಪ್ರತಿಭಟನೆ-ಕಹಳೆ ನ್ಯೂಸ್

ಬಂಟ್ವಾಳ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಮೆಸ್ಕಾಂ ನೀತಿಯನ್ನು ವಿರೋಧಿಸಿ ವಿಟ್ಲದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು. ಮುಖಂಡರಾದ ಸುರೇಶ್ ಭಟ್ ಕೊಜಂಬೆ ಮಾತನಾಡಿ ಸಾಮಾನ್ಯರು ಸೋತಾಗ ಸರ್ಕಾರ ಅವರ ನೆರವಿಗೆ ಬರಬೇಕು. ಅದನ್ನು ಬಿಟ್ಟು ದಬ್ಬಾಳಿಕೆ ಮಾಡುವುದು ಸರಿಯಲ್ಲ ಎಂದು ದೂರಿದರು. ಹಾಗೂ ಜಿಲ್ಲಾ ಕಾರ್ಮಿಕ ಮುಖಂಡ ಬಿ.ಎಂ ಭಟ್ ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಸುತ್ತಿದೆ ಎಂದರು....
ಬಂಟ್ವಾಳ

ಸಜೀಪಮುನ್ನೂರು ಗ್ರಾಮ ಪಂಚಾಯತಿನ ಅರಮನೆ ಹಿತ್ಲುವಿನಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಅರಮನೆಹಿತ್ಲು ಎಂಬಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಒಂದು, ಶನಿವಾರ ರಾತ್ರಿಯ ಬಳಿಕ ಕಂಡುಬಂದಿದೆ. ನಂದಾವರದಿಂದ ಅರಮನೆ ಹಿತ್ಲುವರೆಗೆ ಸಂಪರ್ಕ ರಸ್ತೆ ಕಾಮಗಾರಿಗೆ ಅನುದಾನ ದೊರೆತರೂ ಕೆಲಸ ನಡೆಯದ ಕಾರಣ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ಬರೆಯಲಾಗಿತ್ತು.ಇಲ್ಲಿ ಸುಮಾರು 80ರಷ್ಟು ಮತದಾರರಿದ್ದಾರೆ....
ಬಂಟ್ವಾಳ

ಪೊಳಲಿ ದೇವಸ್ಥಾನದಲ್ಲಿ ಸಾರ್ವಜನಿಕರಿಗೆ ಡಿಸೆಂಬರ್ 28 ರಿಂದ ಫೆಬ್ರವರಿ 17ರವರೆಗೆ ದೇವರ ದರ್ಶನ ಇಲ್ಲ- ಕಹಳೆ ನ್ಯೂಸ್

ಬಂಟ್ವಾಳ: ಡಿಸೆಂಬರ್ 28 ರಿಂದ ಫೆಬ್ರವರಿ 17ರವರೆಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಅಂಗವಾಗಿ ದೃಡಕಲಶ ಆಗಬೇಕಿರುವ ಕಾರಣದಿಂದ ಸಾರ್ವಜನಿಕರಿಗೆ ದೇವರ ದರ್ಶನ ಇರುವುದಿಲ್ಲ. ಕೊರೋನಾ ಹಿನ್ನೆಲೆ ಬ್ರಹ್ಮಕಲಶೋತ್ಸವ ನಡೆದ ಬಳಿಕ ಜೀರ್ಣೋದ್ಧಾರದ ನಂತರದ ಕಾರ್ಯಗಳು ಆಗಿರಲಿಲ್ಲ, ದೃಡಕಲಶ ಬಾಕಿ ಉಳಿದಿತ್ತು. ಹಾಗಾಗಿ ಪ್ರಸ್ತುತ ಸಾನಿಧ್ಯದಲ್ಲಿ ಸಣ್ಣ ಪುಟ್ಟ ಜೀರ್ಣೋದ್ಧಾರದ ಕೆಲಸ ನಡೆಸಿ, ದೃಡಕಲಶ ಮಾಡಬೇಕಾಗಿದೆ.ಹೀಗಾಗಿ ಈ‌‌ ಸಂದರ್ಭದಲ್ಲಿ ದೇವರ ದರ್ಶನ ಇರುವುದಿಲ್ಲ.ಈ ಅವಧಿಯಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಸೀಮೆಯ...
1 209 210 211 212 213 219
Page 211 of 219