ಧರ್ಮಸ್ಥಳ: ಸೌಜನ್ಯಾ ಮನೆಗೆ ವಿಜಯೇಂದ್ರ ಭೇಟಿ -ಕಹಳೆ ನ್ಯೂಸ್
ಧರ್ಮಸ್ಥಳ : ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ವಿದ್ಯಾರ್ಥಿನಿ ಸೌಜನ್ಯಾ ಅವರ, ಪಾಂಗಾಳದಲ್ಲಿರುವ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಮಾವೇಶದ ನಂತರ ಭೇಟಿ ನೀಡಿದರು. ಸೌಜನ್ಯಾ ಅವರ ತಾಯಿ ಕುಸುಮಾವತಿ ಅವರೊಂದಿಗೆ ಚರ್ಚಿಸಿದರು. 'ಸೌಜನ್ಯಾ ಪ್ರಕರಣದ ಬಗ್ಗೆ ಸಿಬಿಐ ಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ. ಅದರ ವೆಚ್ಚವನ್ನು ಬಿಜೆಪಿ ಭರಿಸಲಿದೆ. ವೆಚ್ಚದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಕುಸುಮಾವತಿ ಅವರಿಗೆ...







