Wednesday, September 16, 2026

ಬೆಳ್ತಂಗಡಿ

ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಜಲಪಾತಕ್ಕೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ಆರೋಪ,ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲು-ಕಹಳೆ ನ್ಯೂಸ್

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತ ಪ್ರದೇಶದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೇರಳದ ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಮೇ 20, 2026ರಂದು ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ, ಅವರೊಂದಿಗೆ ಇದ್ದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬವರು ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ – ಕಹಳೆ ನ್ಯೂಸ್

ಬೆಳಾಲು : ಮೇ 16 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ಪ್ರತಿಷ್ಠಾ ವರ್ಧoತ್ಯುತ್ಸವ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಡಾ|ಡಿ ವೀರೇಂದ್ರ ಹೆಗ್ಗಡೆ ಯವರ ಶುಭ ಆಶೀರ್ವಾದದೊಂದಿಗೆ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 16ರಂದು ಅತ್ಯಂತ ವಿಜ್ರಂಭಣೆಯಿಂದ ನಡೆಯಿತು. ಬೆಳಗ್ಗೆ ಶ್ರೀ ದೇವರಿಗೆ ಕಲಶಾಭಿಷೇಕ ಮಧ್ಯಾಹ್ನ ಮಹಾಪೂಜೆ ರಾತ್ರಿ ಪ್ರಸನ್ನ ರಂಗ ಪೂಜೆ ಮತ್ತು ಶ್ರೀದೇವರ ಉತ್ಸವ ಬಲಿ ನಡೆಯಿತು. ವಾರ್ಷಿಕ ಮಹಾಸಭೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ ಮಂಜೂರು – ಶಾಸಕ ಹರೀಶ್ ಪೂಂಜ -ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ಬೆಳಾಲು ಗ್ರಾಮಸ್ಥರ ಬಹುಕಾಲದ ಬೇಡಿಕೆಯಂತೆ ಈ ಪ್ರದೇಶದಲ್ಲಿ ಸೇತುವೆ ನಿರ್ಮಾಣದ ಅಗತ್ಯತೆ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದ್ದು, ಲೋಕೋಪಯೋಗಿ ಇಲಾಖೆ ಮುಖಾಂತರ ಕಾಮಗಾರಿ ಅನುಷ್ಟಾನಗೊಳಿಸಲು ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕ್ಯಾಂಟೀನ್ ಹೆಸರಲ್ಲಿ ವೇಶ್ಯಾವಾಟಿಕೆ… ಪೊಲೀಸರ ದಾಳಿ, ಮೂವರ ಬಂಧನ -ಕಹಳೆ ನ್ಯೂಸ್

ಬೆಳ್ತಂಗಡಿ: ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ 'ಪವನ್ ಕ್ಯಾಂಟೀನ್' ಮೇಲೆ ಬೆಳ್ತಂಗಡಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆಹಚ್ಚಿದ್ದಾರೆ. ದಾಳಿಯ ವೇಳೆ ಕ್ಯಾಂಟಿನ್ ಮಾಲೀಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕ್ಯಾಂಟೀನ್ ಮಾಲಕ ಸುಂದರ್ ಶೆಟ್ಟಿ ಹಾಗೂ ಗಿರಾಕಿಗಳಾದ ಉಸ್ಮಾನ್, ಹೈದರ್ ಬಂಧಿತರು. ಪವನ್‌ ಕ್ಯಾಂಟೀನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಡೆಯುತ್ತಿರುವುದು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಇವರಿಗೆ ಗೌರವ ಸನ್ಮಾನ -ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯದ ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಳಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಸುಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು ಮಾಡಿ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಗಳಿಸಿದ್ದು ಇವರ ಈ ಸಾಧನೆಯನ್ನು ಗುರುತಿಸಿ ಟ್ರಸ್ಟ್ ನ ವತಿಯಿಂದ ಗೌರವ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕನ್ಯಾಡಿ ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಾಗೂ ಮೊಗ್ರು ಗ್ರಾಮ ಮುಗೇರಡ್ಕ -ಅಲೆಕ್ಕಿ ಶ್ರೀರಾಮ ಶಿಶುಮಂದಿರ ಮಕ್ಕಳ ಶಿಕ್ಷಣ ಮತ್ತು ಅನ್ನಯಜ್ಞ ಯೋಜನೆಗೆ ನವಜೋಡಿಗಳಿಂದ ದೇಣಿಗೆ ಹಸ್ತಾಂತರ -ಕಹಳೆ ನ್ಯೂಸ್

ಮೊಗ್ರು : ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಹೇರ ನಿವಾಸಿ, ಕನ್ಯಾಡಿ ಸೇವಾಭಾರತಿ ಸಂಸ್ಥೆಯ ಸಿಬ್ಬಂದಿಯಾದ ಶ್ರೀ ಕುಸುಮಾಧರ ಹಾಗೂ ಶ್ರೀಮತಿ ಪೂರ್ಣಿಮಾರವರ ಶುಭವಿವಾಹವು ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಎಪ್ರಿಲ್.20 ರoದು ನೆರವೇರಿತು. ಈ ಸಂದರ್ಭದಲ್ಲಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾoಗರಿಗೆ ನಿರ್ಮಾಣವಾಗುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 15,000/- ಹಾಗೂ ಮೊಗ್ರು ಗ್ರಾಮ ಮುಗೇರಡ್ಕ ಅಲೆಕ್ಕಿ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಶ್ರೀ ರಾಮ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ -ಕಹಳೆ ನ್ಯೂಸ್

ಬೆಳ್ತಂಗಡಿ : ಎ 21 ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 21 ರಂದು ಪಕ್ಷದ ಕಚೇರಿಯಲ್ಲಿ ಸಭೆ,ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಪ್ರಭಾರಿ ಸುರೇಶ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ. ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಭರತ್ ಕೃಷ್ಣಾಪುರ ಇವರುಗಳು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಚಲಿಸುತ್ತಿದ್ದ ಬಸ್‌ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು -ಕಹಳೆ ನ್ಯೂಸ್

ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸೊಂದರ ಬಾಗಿಲು ಏಕಾಏಕಿ ತೆರೆದು ಸಹೋದರಿಯರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡ‌ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್‌ನಲ್ಲಿ ಮಂಗಳವಾರ (ಮಾ.31) ನಡೆದಿದೆ. ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿ ಚರಿಷ್ಮಾ, ಪಿಯುಸಿ ವಿದ್ಯಾರ್ಥಿನಿ ಚಸ್ಮಿಕಾ ಗಾಯಗೊಂಡವರು. ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆಗೆ ಬಸ್ ಸಂಚರಿಸುತ್ತಿತ್ತು. ರೇಷ್ಮೆ ರೋಡ್‌ ಬರುತ್ತಿದ್ದಂತೆ ಬಸ್ ಬಾಗಿಲು‌ ಏಕಾಏಕಿ ತೆರೆದಿದೆ‌. ಪರಿಣಾಮ ಬಸ್ ಬಾಗಿಲ ಬಳಿಯಿದ್ದ ಸಹೋದರಿಯರಿಬ್ಬರು ರಸ್ತೆಗೆ ಬಿದ್ದಿದ್ದಾರೆ. ಇವರಲ್ಲಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿ...
1 2 3 4 5 83
Page 3 of 83