Tuesday, March 17, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ದೀಪೋತ್ಸವ ; ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ಶ್ರೀ ದೇವರ ಹೊಸಕಟ್ಟೆ ಉತ್ಸವ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಆರಂಭಗೊಂಡ ಲಕ್ಷ ದೀಪೋತ್ಸವದ ಮೊದಲ ದಿನ ಶುಕ್ರವಾರ (ಡಿ. 8) ರಾತ್ರಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ಶ್ರೀ ದೇವರ ಹೊಸಕಟ್ಟೆ ಉತ್ಸವ ನೆರವೇರಿತು. ಶ್ರೀ ಮಂಜುನಾಥ ಸ್ವಾಮಿಗೆ ಗರ್ಭ ಗುಡಿಯೊಳಗೆ ವಿಶೇಷ ಪೂಜೆಗಳು ನೆರವೇರಿದ ಬಳಿಕ ಅಂಗಣದಲ್ಲಿ ಸರ್ವ ವಾದ್ಯಗಳೊಂದಿಗೆ 16 ಸುತ್ತು ಬಂದು ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇರಿಸಿ ದೇಗುಲದ ಮುಂಭಾಗದ ವಸಂತ ಮಹಲಿನ ಹೊಸಕಟ್ಟೆಗೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯಲ್ಲಿ ಕರುಗಳನ್ನು ಕೊಂದು ತಿಂದ ಚಿರತೆ, ಸ್ಥಳೀಯರಲ್ಲಿ ಆತಂಕ – ಕಹಳೆ ನ್ಯೂಸ್

ಬೆಳ್ತಂಗಡಿ, ಡಿ 5 : ಮನೆ ಬಳಿ ಕಟ್ಟಿ ಹಾಕಿದ ಎರಡು ಕರುಗಳನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಬೆಳ್ತಂಗಡಿಯ ಮುಂಡೂರು ಬಳಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿನ ಮುಂಡೂರು ಗ್ರಾಮದ ಕೇರಿಯಾರ್ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಕರುಗಳನ್ನು ಚಿರತೆ ಕೊಂದು ತಿಂದಿದೆ. ಮನೆ ಬಳಿಕ ಕಟ್ಟಿ ಹಾಕಿದ್ದ ಕರಿಗಳ ಮೇಲೆ ಭಾನುವಾರ ರಾತ್ರಿ ದಾಳಿ ಮಾಡಿದ ಚಿರತೆ ತೋಟಕ್ಕೆ ಎಳೆದೊಯ್ದು...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ ; ಭಯದ ವಾತಾವರಣ ನಿರ್ಮಾಣ – ಕಹಳೆ ನ್ಯೂಸ್

ಬೆಳ್ತಂಗಡಿ: ಚಾರ್ಮಾಡಿ ಬಣಕಲ್‌ ಘಾಟಿಯ 3ನೇ ತಿರುವಿನಲ್ಲಿ ಒಂಟಿ ಸಲಗವೊಂದು ರವಿವಾರ ಸಂಜೆ ವಾಹನ ಸವಾರರಿಗೆ ಪ್ರತ್ಯಕ್ಷವಾಗಿದ್ದರಿಂದ ಸವಾರರು ಭಯಭೀತರಾದ ಘಟನೆ ನಡೆದಿದೆ. ಘಾಟಿಯ 3ನೇ ತಿರುವಿನಲ್ಲಿ ಸಂಜೆ ಒಂಟಿ ಸಲಗವೊಂದು ರಸ್ತೆಗೆ ದಾಟಲು ಮುಂದಾಗಿದೆ. ಇದರಿಂದ ಘಾಟ್‌ ರಸ್ತೆಯಲ್ಲಿ ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು. ಒಂಟಿ ಸಲಗವು ಒಂದು ಗಂಟೆಗೂ ಅಧಿಕ ಕಾಲ ರಸ್ತೆಯಲ್ಲೇ ಇದ್ದು ಅನಂತರ ತಿರುವಿನಲ್ಲಿ ಅರಣ್ಯಕ್ಕೆ ಸಾಗಿದ್ದು ವಾಹನ ಸವಾರರು ಕಾಡಾನೆಯ ವೀಡಿಯೋವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ....
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ. ವಿಜಯೇಂದ್ರರನ್ನು ಅಭಿನಂದಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರರವರನ್ನು ಬೆಂಗಳೂರಿನಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿಯಾಗಿ ಅಭಿನಂದಿಸಿದರು....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅನ್ಯಮತೀಯರ ಅಕ್ರಮ ವಶದಲ್ಲಿದ್ದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾಗ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಮರಳಿ ದೇವಸ್ಥಾನಕ್ಕೆ ಲಭಿದ ಬೆನ್ನಲ್ಲೇ ಜಮೀನಿನಲ್ಲಿ ಪಾಳು ಬಿದ್ದಿರುವ ಬಾವಿಯಲ್ಲಿ ದೇವರ ಪರಿಕರಗಳು ಪತ್ತೆ..!! – ಕಹಳೆ ನ್ಯೂಸ್

ಬೆಳ್ತಂಗಡಿ : 800 ವರುಷಗಳ ಇತಿಹಾಸವಿರುವ ದೇವಸ್ಥಾನದ ಜಮೀನಿನಲ್ಲಿರುವ ಪಾಳು ಬಿದ್ದಿರುವ ಬಾವಿಯಲ್ಲಿ ದೇವರ ಪರಿಕರಗಳು ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಭಟ್ರಬೈಲು ದೇವರಗುಡ್ಡೆ ತೆಕ್ಕಾರಿನಲ್ಲಿ ನಡೆದಿದೆ. ಸುಮಾರು 800 ವರುಷಗಳ ಇತಿಹಾಸವಿರುವ ಶ್ರೀ ಗೋಪಾಲ ಕೃಷ್ಣ ದೇವಸ್ಥಾನ ಭಟ್ರಬೈಲು ದೇವರಗುಡ್ಡೆ ತೆಕ್ಕಾರು ಇದರ ಜಮೀನಿನಲ್ಲಿ ಪಾಳು ಬಿದ್ದಿರುವ ಬಾವಿಯಲ್ಲಿ ದೇವರ ಪರಿಕರಗಳು ಲಭ್ಯವಾಗಿವೆ. ಈ ದೇವಸ್ಥಾನದ ಜಮೀನಿನ ದಾಖಲೆ ಪತ್ರಗಳು ದೇವಸ್ಥಾನದ ಹೆಸರಿನಲ್ಲಿದ್ದರೂ ಅಲ್ಲಿನ ಕೆಲ ಜಾಗ ಅನ್ಯಮತೀಯರ...
ದಕ್ಷಿಣ ಕನ್ನಡಬೆಳ್ತಂಗಡಿಮಾಹಿತಿರಾಜಕೀಯಹೆಚ್ಚಿನ ಸುದ್ದಿ

ಬೆಳ್ತಂಗಡಿಯಲ್ಲಿ ಮತ್ತೆ ಮರುಕಳಿಸಿದ ಕಾಂತಾರ..! ಬಡವರ ಮನೆಯ ಕೆಡವಲು ರಾಜ್ಯ ಸರ್ಕಾರದ ಕುಮ್ಮಕ್ಕು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ..! –ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಕಳೆಂಜದ ದೇವಣ್ಣ ಗೌಡ ಅವರ ಮನೆ ಧ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯದ ಬಡವರ ವಿರೋಧಿ ಸರ್ಕಾರದ ವಿರುದ್ಧ ದ.ಕ ಜಿಲ್ಲೆಯ ಶಾಸಕರು, ಕಾರ್ಯಕರ್ತರು ಸಹಿತ ಹಲವಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ. ಸ್ವಾತಂತ್ರ್ಯ ಪೂರ್ವದಿಂದಲೂ ಕೃಷಿ ಚಟುವಟಿಕೆಯೊಂದಿಗೆ ಸದರಿ ಭೂಮಿಯಲ್ಲಿ ವಾಸಿಸುತ್ತಿರುವ ಕುಟುಂಬವನ್ನು ಮುನ್ಸೂಚನೆಯೂ ನೀಡದೆ ದಬ್ಬಾಳಿಕೆಯೊಂದಿಗೆ ಒಕ್ಕಲೆಬ್ಬಿಸಲು ಸಂಚು ರೂಪಿಸಿರುವ ಸರ್ಕಾರ ಹಾಗೂ ಅರಣ್ಯ ಇಲಾಖೆಯ ವಿರುದ್ಧ ಜನರು ಈಗಾಗಲೇ ರೊಚ್ಚಿಗೆದ್ದಿದ್ದಾರೆ. ಬಡವರೊಂದಿಗೆ ಸರ್ಕಾರ...
ಗೋಕರ್ಣದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಾಘವೇಶ್ವರಭಾರತೀ ಶ್ರೀಗಳ 36ನೇ ಚಾತುರ್ಮಾಸ್ಯದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭಾಗಿ ; ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಶ್ರಮಿಕ – ಕಹಳೆ ನ್ಯೂಸ್

ಉತ್ತರ ಕನ್ನಡ : ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಶ್ರೀ ರಾಮಚಂದ್ರಾಪುರ ಮಠದ 36ನೇ ಜಗದ್ಗುರು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಶಾಸಕ ಹರೀಶ್ ಪೂಂಜ ಭೇಟಿ ಮಾಡಿದರು. ಪೂಜ್ಯ ಶ್ರೀ ಆಶೀರ್ವಾದವನ್ನು ಪಡೆದು ಮಾತುಕತೆ ನಡೆಸಿದರು.  ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಸೌಜನ್ಯ ಪ್ರಕರಣ : ‌ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಕೊನೆಯ ಉಳಿದಿದೆ 4 ದಿನ ; ದಯಮಾಡಿ ಮೇಲ್ಮನವಿ ಸಲ್ಲಿಸಿ, ಹೈಕೋರ್ಟ್ ಸೂಚನೆಯಂತೆ ಸೌಜನ್ಯ ಮನೆಗೆ ಭೇಟಿ ನೀಡಿ ವಿನಂತಿಸಿಕೊಂಡ ವಿಶ್ವಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಹಾಗೂ ಅರ್ಜಿದಾರರು – ಕಹಳೆ‌‌ ನ್ಯೂಸ್

ಸೌಜನ್ಯ ಪ್ರಕರಣ : ‌ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಕೊನೆಯ ಉಳಿದಿದೆ 4 ದಿನ ; ದಯಮಾಡಿ ಮೇಲ್ಮನವಿ ಸಲ್ಲಿಸಿ, ಹೈಕೋರ್ಟ್ ಸೂಚನೆಯಂತೆ ಸೌಜನ್ಯ ಮನೆಗೆ ಭೇಟಿ ನೀಡಿ ವಿನಂತಿಸಿಕೊಂಡ ವಿಶ್ವಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಹಾಗೂ ಅರ್ಜಿದಾರರು ಬೆಳ್ತಂಗಡಿ : ಸೌಜನ್ಯ ಪ್ರಕರಣದ ವಿಚಾರಣೆ ಆಗ್ರಹಿಸಿ, ಗಿರೀಶ ಭಾರದ್ವಾಜ್ , ನವೀನ್ ಕುಮಾರ್ ನೆರಿಯ ಬೆಳ್ತಂಗಡಿ , ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪೂತ್ತೂರು ಒಟ್ಟಾಗಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ...
1 36 37 38 39 40 80
Page 38 of 80