ಕುಂದಾಪುರ: ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ : ಆಡಳಿತ ವೈದ್ಯಾಧಿಕಾರಿ ವಿರುದ್ಧ ದೂರು – ಆರೋಪಿ ನಾಪತ್ತೆ-ಕಹಳೆ ನ್ಯೂಸ್
ಕುಂದಾಪುರ: ಕಳೆದ ಆರು ತಿಂಗಳಿನಿAದ ತನಗೆ ಹಗಲು ರಾತ್ರಿಯೆನ್ನದೇ ವೈದ್ಯಾಧಿಕಾರಿಯೊಬ್ಬ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಸಹೋದ್ಯೋಗಿ ವೈದ್ಯೆಯೊಬ್ಬಳು ನೀಡಿದ ದೂರಿನಂತೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ, ರಾಬರ್ಟ್ ರೆಬೆಲ್ಲೋ ಅವರ ವಿರುದ್ಧ ಮಾನಭಂಗಕ್ಕೆ ಯತ್ನ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕುಂದಾಪುರದ ಸರ್ಕಾರೀ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ವಿರುದ್ಧ ಹಿಂದಿನಿAದಲೇ ಹಲವು ಆರೋಪಗಳಿದ್ದವು. ಇದೀಗ ತನ್ನ ಆಸ್ಪತ್ರೆಯಲ್ಲಿರುವ ಗುತ್ತಿಗೆ ಆಧಾರದಲ್ಲಿ ಕೆಲಸ...







