Friday, March 13, 2026

ಕುಂದಾಪುರ

ಉಡುಪಿಕುಂದಾಪುರಬೈಂದೂರುರಾಜ್ಯಸುದ್ದಿ

ತೌಕ್ತೆ ಚಂಡಮಾರುತ ಎಫೆಕ್ಟ್ | ಉಡುಪಿ ಜಿಲ್ಲೆಯಾದ್ಯಂತ ಭಾರಿ ಅವಾಂತರ ; ಕೃಷಿಕ ಸಾವು – ಕಹಳೆ ನ್ಯೂಸ್

ಉಡುಪಿ: ಅರಬ್ಬೀ ಸಮುದ್ರದಲ್ಲಿ ಎದ್ದಿರುವ ತೌಕ್ತೆ ಚಂಡಮಾರುತದಿಂದ ಉಡುಪಿ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಭಾರಿ ಮಳೆ ಬಿದ್ದಿದೆ. ಹೀಗಾಗಿ ಉಡುಪಿ, ಬ್ರಹ್ಮಾವರ, ಕುಂದಾಪುರ, ಬೈಂದೂರಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ಕಾಪು ತಾಲೂಕಿನಲ್ಲಿ ವಿದ್ಯುತ್ ತಂತಿ ಕೆಳಗೆ ಬಿದ್ದು ವಿದ್ಯುತ್ ತಗುಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಬ್ರಹ್ಮಾವರ ತಾಲೂಕಿನಲ್ಲಿ 4 ಮನೆಗಳಗೆ, ಬೈಂದೂರು ತಾಲೂಕಿನಲ್ಲಿ 3 ಮನೆಗಳಿಗೆ, 5 ತಾತ್ಕಾಲಿಕ ಶೆಡ್‍ಗಳಿಗೆ ಹಾಗೂ ಉಡುಪಿ ತಾಲೂಕಿನಲ್ಲಿ 1 ಮನೆಗೆ ಭಾಗಶಃ ಹಾನಿಯಾಗಿದೆ. ಜಿಲ್ಲೆಯಾದ್ಯಂತ...
ಉಡುಪಿಕುಂದಾಪುರಸುದ್ದಿ

ನಾಪತ್ತೆಯಾಗಿದ್ದ ಖ್ಯಾತ ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ ಪತಿ, ಪೆರ್ಡೂರು ಮೇಳದ ಕಲಾವಿದ ಕಡಬಾಳ ಉದಯ ಹೆಗಡೆ ಬೆಂಗಳೂರಿನಲ್ಲಿ ಪತ್ತೆ – ಕಹಳೆ ನ್ಯೂಸ್

ಕೋಟ: ಖ್ಯಾತ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ಎ.21ರಂದು ನಾಪತ್ತೆಯಾಗಿದ್ದು ಇದೀಗ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲದಿಂದ ತಿಳಿದು ಬಂದಿದೆ. ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡೆಯಂಗಡಿ ಪ್ರಧಾನ ನಗರದಲ್ಲಿ ವಾಸವಾಗಿದ್ದ ಹೆಗಡೆಯವರು ಎ.21 ರಂದು ಸಂಜೆ ಸುಮಾರು 6ಗಂಟೆಗೆ ಮನೆಯಿಂದ ಯಕ್ಷಗಾನ ಪ್ರದರ್ಶನಕ್ಕೆಂದು ತೆರಳಿದವರು ಮತ್ತೆ ವಾಪಸಾಗಿರಲಿಲ್ಲ ಹಾಗೂ ಮೊಬೈಲ್ ಗೆ ಕರೆ ಮಾಡಿದಾಗ ಸಂಪರ್ಕ ಸಾಧ್ಯವಾಗಿರುವುದಿಲ್ಲ. ಈ ಬಗ್ಗೆ ಕಡಬಾಳರ ಪತ್ನಿ, ಕಲಾವಿದೆ ಅಶ್ವಿನಿ...
ಉಡುಪಿಕುಂದಾಪುರಯಕ್ಷಗಾನ / ಕಲೆಸುದ್ದಿ

ಬಡಗುತಿಟ್ಟಿನ ಪ್ರಸಿದ್ದ ಮೇಳದ ಯಕ್ಷಗಾನ ಕಲಾವಿದ ಉದಯ ಹೆಗಡೆ ಕಡಬಾಳ ಆಶ್ಚರ್ಯಕರ ರೀತಿಯಲ್ಲಿ ನಾಪತ್ತೆ ; ಪತ್ನಿ ಅಶ್ವಿನಿ ಕೊಂಡದಕುಳಿಯಿಂದ ಪೊಲೀಸರಿಗೆ ದೂರು – ಕಹಳೆ ನ್ಯೂಸ್

ಉಡುಪಿ, ಎ 28 : ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರು ನಾಪತ್ತೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮತ್ಯಾಡಿಯ ಗುಡ್ಡೆಯಂಗಡಿ ನಿವಾಸಿ ಉದಯ ಹೆಗಡೆ ಕಡಬಾಳ ನಾಪತ್ತೆಯಾಗಿರುವ ವ್ಯಕ್ತಿ. ಪ್ರಸಿದ್ಧ ಯಕ್ಷಗಾನ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆಯವರ ಪುತ್ರಿ ಅಶ್ವಿನಿ ಕೊಂಡದಕುಳಿ ರವರನ್ನು ಪ್ರೀತಿಸಿ ವಿವಾಹವಾಗಿದ್ದರು. ಪೆರ್ಡೂರು ಮೇಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಉದಯ್ ಎ. 21 ರಂದು ಯಕ್ಷಗಾನದ ತಿರುಗಾಟಕ್ಕಾಗಿ ಮನೆಯಿಂದ ತೆರಳಿದ್ದರು. ಬಳಿಕ ಯಾವುದೇ ಫೋನ್ ಸಂಪರ್ಕಕ್ಕೆ ಸಿಗಲಿಲ್ಲ. ಗಾಬರಿಗೊಂಡ ಪತ್ನಿ...
ಕುಂದಾಪುರ

ಮೇ.1ರಿಂದ 10ರ ತನಕ ಕುಂದಾಪುರ ಮತ್ತು ಮಂಗಳೂರಿನಲ್ಲಿ ಕ್ರೀಡಾ ಹಬ್ಬ ನಡೆಯಲಿದೆ ; ಟಾರ್ಪೆಡೊಸ್ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಗೌತಮ್ ಶೆಟ್ಟಿ-ಕಹಳೆ ನ್ಯೂಸ್

ಕುಂದಾಪುರ : ಕರ್ನಾಟಕ ಕ್ರೀಡಾ ಇತಿಹಾಸದಲ್ಲೇ ಅಪೂರ್ವವೆನಿಸಿರುವ ಕ್ರೀಡಾ ಹಬ್ಬವೊಂದನ್ನು ಆಯೋಜಿಸಲು ರಾಜ್ಯದ ಅತ್ಯಂತ ಜನಪ್ರಿಯ ಸ್ಪೋಟ್ರ್ಸ್ ಕ್ಲಬ್‍ಗಳಲ್ಲಿ ಒಂದಾಗಿರುವ ಟಾರ್ಪೆಡೊಸ್ ಸ್ಪೋಟ್ರ್ಸ್ ಕ್ಲಬ್ ನೇತೃತ್ವದಲ್ಲಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 10 ದಿನಗಳ ಕಾಲ ಹೊನಲು ಬೆಳಕಿನ ಕ್ರೀಡಾ ಹಬ್ಬವನ್ನು ಆಯೋಜಿಸಿದೆ. ಇದೇ ಮೇ.1ರಿಂದ 10ರ ತನಕ ಕುಂದಾಪುರ ಮತ್ತು ಮಂಗಳೂರಿನಲ್ಲಿ ಕ್ರೀಡಾ ಹಬ್ಬ ನಡೆಯಲಿದೆ ಎಂದು ಟಾರ್ಪೆಡೊಸ್ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಗೌತಮ್ ಶೆಟ್ಟಿ ತಿಳಿಸಿದ್ದಾರೆ....
ಕುಂದಾಪುರ

ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ; ಗಗನ್ ಪೂಜಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಕುಂದಾಪುರ ನ್ಯಾಯಾಲಯ-ಕಹಳೆ ನ್ಯೂಸ್

ಕುಂದಾಪುರ : ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆ ಬಂಧಿತನಾಗಿರುವ ಉಡುಪಿ ಜಿಲ್ಲೆಯ ಪಾರಂಪಳ್ಳಿ ಪಡುಕೆರೆಯ ನಿವಾಸಿ ಗಗನ್ ಪೂಜಾರಿ ಜಾಮೀನು ಅರ್ಜಿಯನ್ನು ಕುಂದಾಪುರ ನ್ಯಾಯಾಲಯ ತಿರಸ್ಕರಿಸಿದೆ. ಫೆಬ್ರವರಿ 23 ರಂದು ರಾತ್ರಿ ಆರೋಪಿ ಗಗನ್ ಪೂಜಾರಿ ಎಂಬಾತ ಅಕ್ಷಯ್ ಮೊಗವೀರ ಎಂಬಾತನ ತಲೆಗೆ ರಾಡಿನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲ ನಡೆಸಿದ್ದ. ನಂತರ ಸ್ಥಳದಿಂದ ಪರಾರಿಯಾಗಿದ್ದ. ಈ ಕುರಿತು ಗಗನ್ ವಿರುದ್ದ ಕೋಟ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ...
ಕುಂದಾಪುರ

ಕುಂದಾಪುರದ ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ನಾರಾಯಣ ಗಾಣಿಗ ನಿಧನ-ಕಹಳೆ ನ್ಯೂಸ್

ಕುಂದಾಪುರ : ಹಿರಿಯ ಯಕ್ಷಗಾನದ ಸ್ತ್ರೀವೇಷಧಾರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂಡ್ಸೆ ನಾರಾಯಣ ಗಾಣಿಗ ಅವರು ಸೋಮವಾರ ನಿಧನರಾಗಿದ್ದಾರೆ. ಇವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿರುವ ಕೊಲ್ಲೂರಿನ ವಂಡ್ಸೆ ಗ್ರಾಮದವರಾಗಿದ್ದು, ಸುಮಾರು 28 ವಷರ್Àಗಳ ಕಾಲ ಅನೇಕ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಇನ್ನು ಚಿತ್ರಾಂಗದೆ, ದ್ರೌಪದಿ, ಶಶಿಪ್ರಭೆ, ಮಂಡೋದರಿ, ಮೀನಾಕ್ಷಿ, ತಾರೆ ಮುಂತಾದ ಪಾತ್ರಗಳಲ್ಲಿ ಮಿಂಚಿರುವ ನಾರಾಯಣ ಗಾಣಿಗ ಅವರಿಗೆ 2008ನೇ ಸಾಲಿನಲ್ಲಿ ಯಕ್ಷಗಾನ ಅಕಾಡೆಮಿ ಪುರಸ್ಕಾರ, 2013ರಲ್ಲಿ ಮಕ್ಕಳ...
ಉಡುಪಿಕುಂದಾಪುರದಕ್ಷಿಣ ಕನ್ನಡಸಂತಾಪಸುದ್ದಿ

ಹಿರಿಯ ಯಕ್ಷಗಾನ ಕಲಾವಿದ, ಅಪ್ರತಿಮ ವಾಗ್ಮಿ ಮಲ್ಪೆ ವಾಸುದೇವ ಸಾಮಗ ಕೊರೊನಾಕ್ಕೆ ಬಲಿ ; ಶಾಶ್ವತವಾಗಿ ತಿರುಗಾಟ ನಿಲ್ಲಿಸಿದ ಸಂಯಮ’ದ ಸಾಹುಕಾರ – ಕಹಳೆ ನ್ಯೂಸ್

ಉಡುಪಿ: ಯಕ್ಷಗಾನ ರಂಗದ ಹಿರಿಯ ಕಲಾವಿದ, ಸಂಘಟಕರಾದ ಮಲ್ಪೆ ವಾಸುದೇವ ಸಾಮಗ ಅವರು ಅಲ್ಪ ಕಾಲದಿಂದ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ತನ್ನ ವಾಕ್ಪಟುತ್ವದಿಂದ ಹೆಸರು ಗಳಿಸಿದ್ದ ವಾಸುದೇವ ಸಾಮಗ (71) ಅವರು ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿದ್ದರು.   ತೆಂಕು ಬಡಗು ತಿಟ್ಟು ಅಪ್ರತಿಮ ಕಲಾವಿದ ಚತುರ ಮಾತುಗಾರ ಯಕ್ಷಗಾನ ತಾಳಮದ್ದಳೆ ತಂಡ ಕಟ್ಟಿ ಮೊಟ್ಟಮೊದಲು ಸಂಚಾರ ಆರಂಭಿಸಿದ ತಾಳಮದ್ದಳೆ ಅರ್ಥದಾರಿಯಾಗಿದ್ದಾರೆ. ಮಲ್ಪೆ ರಾಮದಾಸ ಸಾಮಗ...
ಉಡುಪಿಕುಂದಾಪುರಸುದ್ದಿ

ಉಡುಪಿಯಲ್ಲಿ ಮತ್ತೆ ಇಂದು 22 ಕೊರೊನಾ ಪಾಸಿಟಿವ್ ; 28 ಮಂದಿ ಡಿಸ್ಚಾರ್ಜ್ – ಕಹಳೆ ನ್ಯೂಸ್

ಉಡುಪಿ, ಜು.09 : ಜಿಲ್ಲೆಯಲ್ಲಿ ಗುರುವಾರದಂದು ಮತ್ತೆ 22 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ 28 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಗುರುವಾರದಂದು ಜಿಲ್ಲೆಯಲ್ಲಿ 843 ರಿಪೋರ್ಟ್ ನೆಗೆಟಿವ್ ಆಗಿವೆ. ಇನ್ನು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1443ಕ್ಕೆ ಏರಿಕೆಯಾಗಿದೆ. ಇನ್ನು ಕೂಡ 2433 ಮಂದಿಯ ವರದಿಗಳು ಕೈ ಸೇರಲು ಬಾಕಿ ಇದೆ. ಜಿಲ್ಲೆಯಲ್ಲಿ ಒಟ್ಟು 223 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ...
1 17 18 19 20
Page 19 of 20