ಭತ್ತದ ನೇಜಿ ನೆಡುವ ಕಾರ್ಯದಲ್ಲಿ ಭಾಗಿಯಾದ ಕುಂದಾಪುರ ತಾಲ್ಲೂಕಿನ ಗುರುಕುಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು – ಕಹಳೆ ನ್ಯೂಸ್
ಕುಂದಾಪುರ: ಕುಂದಾಪುರ ತಾಲ್ಲೂಕಿನ ಬಾಂಡ್ಯ ಗ್ರಾಮದ, ಕೆಳ ಬಾಂಡ್ಯದ ಕೃಷಿ ಗದ್ದೆಗಳಲ್ಲಿ ಭಾನುವಾರ ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಭತ್ತದ ನೇಜಿ ನೆಡುವ ಕಾರ್ಯದಲ್ಲಿ ಭಾಗಿಯಾದರು. ಆಗೊಮ್ಮೆ, ಈಗೊಮ್ಮೆ ಭೋ ಎಂದು ಸುರಿಯುವ ಪುನರ್‌ವಸು ಮಳೆ. ಅಕ್ಕ-ಪಕ್ಕದಲ್ಲೆಲ್ಲ ಕೆಸರು ತುಂಬಿದ ಗದ್ದೆಗಳು, ಮೊಳಕಾಲೆತ್ತರಕ್ಕೆ ಉಡುಪನ್ನು ಕಟ್ಟಿಕೊಂಡು ಗದ್ದೆಗಿಳಿದ ಮಕ್ಕಳಲ್ಲಿ ನಾವೇನು ಈ ಕ್ಷೇತ್ರಕ್ಕೆ ಹೊಸಬರಲ್ಲ ಎನ್ನುವ ಹುಮ್ಮಸ್ಸು. ಸ್ಥಳೀಯ ಮಹಿಳೆಯರೊಂದಿಗೆ ಕೈಜೋಡಿಸಿ ಕ್ಷಣಾರ್ಧದಲ್ಲಿ ಸಾಲು ಸಾಲು ನೇಜಿ ಗಿಡಗಳನ್ನು...







