Sunday, September 6, 2026

ಕುಂದಾಪುರ

ಉಡುಪಿಕುಂದಾಪುರಜಿಲ್ಲೆಸುದ್ದಿ

ಸೈನಿಕರಿಗೆ ಅಭಿನಂದನೆ ಹೇಳಿದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ-ಕಹಳೆ ನ್ಯೂಸ್

ಕುಂದಾಪುರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮುಗ್ಧ ಪ್ರಾವಾಸಾರ್ಥಿಗಳ ಮೇಲೆ ನಡೆದ ಕ್ರೂರ ದಾಳಿಗೆ, ವಿಶ್ವವೇ ಮೆಚ್ಚುವ ರೀತಿಯಲ್ಲಿ ಪ್ರತಿಕಾರ ತೀರಿಸಿಕೊಂಡಿರುವ ಭಾರತದ ಹೆಮ್ಮೆಯ ಸೈನ್ಯದ ಸೈನಿಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದೇಶಿ ಉಗ್ರವಾದಿಗಳು ಭಾರತದ ಮೇಲೆ ನಡೆಸುತ್ತಿರುವ ಕುತಂತ್ರಗಳಿಗೆ ಭಾರತ ಸರಿಯಾದ ರೀತಿಯಲ್ಲಿ ಉತ್ತರ ನೀಡಬೇಕು ಎನ್ನುವ ಕೋಟ್ಯಂತರ ಭಾರತೀಯರ ಒತ್ತಾಸೆಗೆ ಪೂರಕವಾಗಿ ಮೂರು ಸೇನಾಪಡೆಗಳ ಸಮನ್ವಯದಿಂದ ಮಂಗಳವಾರ ನಡುರಾತ್ರಿಯಲ್ಲಿ ಭಾರತದ ಸೈನ್ಯ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕುಂದಾಪುರ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯ ಇ -ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಅವರನ್ನು ಕರ್ತವ್ಯದಲ್ಲಿ ಮುಂದುವರಿಸಲು-: ಶಾಸಕರ ಮನವಿಗೆ ಸ್ಪಂದನೆ-ಕಹಳೆ ನ್ಯೂಸ್

ಕುಂದಾಪುರ: ಇಡೀ ರಾಜ್ಯದಲ್ಲಿ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳನ್ನ ಕಡಿತಗೊಳಿಸುತ್ತಿರುವುದು ವಿಚಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಗಮನಕ್ಕೆ ಬಂದ ನಂತರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಮನವಿಯನ್ನ ಸಲ್ಲಿಸಿದ್ದು ಕುಂದಾಪುರ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆ ಮತ್ತು ತಾಯಿ ಮಕ್ಕಳ ಹೆರಿಗೆ ಆಸ್ಪತ್ರೆಯಲ್ಲಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದ 5ಜನ ಡಾಟಾ ಎಂಟ್ರಿ...
ಕುಂದಾಪುರಶಿಕ್ಷಣಸುದ್ದಿ

ಮಂಥನ ಬೇಸಿಗೆ ಶಿಬಿರ 4ನೇ ದಿನದ ಕಾರ್ಯಕ್ರಮ ಉದ್ಘಾಟನೆ : ಮಕ್ಕಳ ಸರ್ವತೋಮುಖ ಪ್ರಗತಿಗೆ ಪಠ್ಯೇತರ ಚಟುವಟಿಕೆ ಅತ್ಯಗತ್ಯ” – ಭಾಸ್ಕರ ಶೆಟ್ಟಿ-ಕಹಳೆ ನ್ಯೂಸ್

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ನಾಲ್ಕನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರ್ಕೂರು ಇದರ ಪ್ರಾಂಶುಪಾಲರಾದ ಪ್ರೊ.ಭಾಸ್ಕರ ಶೆಟ್ಟಿ "ನಮ್ಮ ಬದುಕಿಗೆ ಅಗತ್ಯವಾದ ಕಲೆಗಳನ್ನು, ತತ್ವಗಳನ್ನು, ಕೌಶಲಗಳನ್ನು, ಬೇಸಿಗೆ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಮಂಥನ ಬೇಸಿಗೆ ಶಿಬಿರ 3ನೇ ದಿನದ ಕಾರ್ಯಕ್ರಮ ಉದ್ಘಾಟನೆ;”ಬದುಕಿನ ಸವಾಲುಗಳು ಯಶಸ್ವಿಗೆ ದಾರಿದೀವಿಗೆ” – ಸುರೇಂದ್ರ ಶೆಟ್ಟಿ –ಕಹಳೆ ನ್ಯೂಸ್

ಕುಂದಾಪುರ: ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ಮೂರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೊಲ್ಲೂರು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುರೇಂದ್ರ ಶೆಟ್ಟಿ"ಈ ಪರಿಸರದ ಎಲ್ಲಾ ಮಕ್ಕಳಿಗೂ ಉಪಯೋಗವಾಗುವಂತೆ ಬೇಸಿಗೆ ಶಿಬಿರ ಆಯೋಜಿಸಿರುವುದು ಅಭಿನಂದನೀಯ. ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಒಂದೆಡೆ ಸೇರಿಸಿ ಬೇಸಿಗೆ ಶಿಬಿರವನ್ನು ಆಯೋಜಿಸಿ ಚಟುವಟಿಕೆಗಳನ್ನು...
ಕುಂದಾಪುರಜಿಲ್ಲೆಸುದ್ದಿ

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಬೇಸಿಗೆ ಶಿಬಿರ ದಾಖಲೆಯ 1064 ವಿದ್ಯಾರ್ಥಿಗಳು ಭಾಗಿ ;”ಮಕ್ಕಳ ಪ್ರತಿಭೆಗಳ ಅನಾವರಣಕ್ಕೆ ಬೇಸಿಗೆ ಶಿಬಿರ ಸಹಕಾರಿ”- ಕೆ. ಜಯಪ್ರಕಾಶ್ ಹೆಗ್ಡೆ-ಕಹಳೆನ್ಯೂಸ್

ಕುಂದಾಪುರ: "ಶಿಕ್ಷಣ ಎಂದರೆ ಕೇವಲ ಅಕ್ಷರ ಅಭ್ಯಾಸ ಅಲ್ಲ. ಕ್ರೀಡೆ, ಕಲೆ ಮುಂತಾದ ಚಟುವಟಿಕೆಗಳು ಅದರ ಭಾಗವಾದರೆ ಮಾತ್ರ ಅವರೊಳಗಿನ ಪ್ರತಿಭೆಗಳು ಹೊರಹೊಮ್ಮಲು ಸಾಧ್ಯವಾಗುತ್ತದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಇಂತಹ ಬೇಸಿಗೆ ಶಿಬಿರಗಳು ಹೆಚ್ಚು ಸಹಕಾರಿಯಾಗುತ್ತದೆ. ಮಕ್ಕಳು ರಜಾದಿನಗಳ ಸಮಯವನ್ನ ಸದುಪಯೋಗ ಪಡಿಸಿಕೊಂಡು ಇನ್ನಷ್ಟು ಕ್ರಿಯಾಶೀಲರಾಗಲು ಬೇಸಿಗೆ ಶಿಬಿರಗಳು ಉತ್ತಮ ಆಯ್ಕೆ ಆಗಿರುತ್ತದೆ. ಮಕ್ಕಳಿಗೆ ಶಾಲಾ ಮಟ್ಟದಲ್ಲಿಯೇ ದುಶ್ಚಟಗಳಿಂದ ,ಕೆಟ್ಟ ಹವ್ಯಾಸಗಳಿಂದ ದೂರವಿರಿಸುವ ಅರಿವು ಕಾರ್ಯಕ್ರಮಗಳನ್ನ ಆಯೋಜಿಸಿದಾಗ ಉತ್ತಮ ಸಮಾಜದ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಸರ್ಕಾರಿ ಜಮೀನಿಗೆ ತಂತಿಬೇಲಿ‌ ಅಳವಡಿಕೆ: ಕಂದಾಯ ಅಧಿಕಾರಿಗಳಿಂದ ತೆರವು-ಕಹಳೆ ನ್ಯೂಸ್

ಕುಂದಾಪುರ: ಆಜ್ರಿ ಗ್ರಾ.ಪಂ‌ ವ್ಯಾಪ್ತಿಯ ಬಾಂಡ್ಯ ಸರಕಾರಿ ಪ್ರಾಥಮಿಕ ಶಾಲೆಯ ಹಿಂಭಾಗ ಖಾಸಗಿ ವ್ಯಕ್ತಿಯೋರ್ವರು ಸರ್ಕಾರಿ ಜಾಗಕ್ಕೆ ತಂತಿಬೇಲಿ ಅಳವಡಿಸಿದ ಬಗ್ಗೆ ಸಾರ್ವಜನಿಕ‌ ದೂರು ಬಂದ‌ ಹಿನ್ನೆಲೆ ವಂಡ್ಸೆ ಹೋಬಳಿ ಕಂದಾಯ ಇಲಾಖೆ ಕಾರ್ಯಚರಣೆ ನಡೆಸಿ ತಂತಿಬೇಲಿಯನ್ನು ತೆರವುಗೊಳಿಸಿ ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆದ ಘಟನೆ ಗುರುವಾರ ನಡೆದಿದೆ. ಕಳೆದ ವಾರಗಳ ಹಿಂದೆ ಬಾಂಡ್ಯ ಸರ್ಕಾರಿ ಶಾಲೆಯ ಹಿಂಭಾಗ ಕೊಡ್ಲಾಡಿ ಗ್ರಾಮದ ಸರ್ವೇ ನಂಬರ್ 118/* ರಲ್ಲಿ ಸುಮಾರು 10...
ಕುಂದಾಪುರಜಿಲ್ಲೆಸುದ್ದಿ

ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ಸರಕಾರದ ಡಿ.ಕೆ ಶಿವಕುಮಾರ್ ವಿರುದ್ಧ-: ಶಾಸಕ ಕಿರಣ್ ಕೊಡ್ಗಿ ಆಕ್ರೋಶ -ಕಹಳೆ ನ್ಯೂಸ್

ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಇವರ ನೇತೃತ್ವದಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ಸಂವಿಧಾನ ತಿದ್ದುಪಡಿ ಮಾಡುತ್ತಿವೆ ಎಂಬ ಹೇಳಿಕೆಯ ವಿರುದ್ಧ ಬ್ರಹತ್ ಪ್ರತಿಭಟನೆಯಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಮಾತಾನಾಡಿದ ಅವರು ರಾಜ್ಯದ ಅಭಿವೃದ್ಧಿಗಿಂತ ವೋಟ್ ಬ್ಯಾಂಕ್ ರಾಜಕಾರಣವೇ ಮೇಲು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ ಕಾಂಗ್ರೆಸ್ ಸರಕಾರ, ಮುಸಲ್ಮಾನರಿಗೆ ಶೇಕಡ 4ರಷ್ಟು ಮೀಸಲಾತಿ ಕೊಡುವ ಮೂಲಕ ಜಾತಿ ಧರ್ಮಗಳ ಮಧ್ಯ ಬಿರುಕು ಮೂಡಿಸುತ್ತಿರುವುದಲ್ಲದೆ. ಮುಸ್ಲಿಮರಿಗಾಗಿ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಜೇಡಿ ಮಣ್ಣಿನ‌ ಸಮಸ್ಯೆ ಶೀಘ್ರವೇ ಪರಿಹರಿಸಿ: ವಿ. ನರಸಿಂಹ ಒತ್ತಾಯ-ಕಹಳೆ ನ್ಯೂಸ್

ಕುಂದಾಪುರ: ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ಜೇಡಿಮಣ್ಣನ್ನು ತೆಗೆಯಲು ನಿರ್ಬಂಧ ಹೇರಲಾಗಿದೆ. ಹಂಚು ಉದ್ಯಮಕ್ಕೆ ಅವಶ್ಯವಿರುವ ಜೇಡಿಮಣ್ಣಿನ ಸಮಸ್ಯೆಯನ್ನು ಸರ್ಕಾರ ಶೀಘ್ರವೇ ಪರಿಹಾರ‌ ಮಾಡಬೇಕು ಎಂದು ಉಡುಪಿ ಜಿಲ್ಲಾ ಹೆಂಚು ಕಾರ್ಮಿಕ ಸಂಘದ ಅಧ್ಯಕ್ಷ ವಿ. ನರಸಿಂಹ ಒತ್ತಾಯಿಸಿದ್ದಾರೆ. ಮಂಗಳವಾರ ಸಂಜೆ ನಗರದ ಶಾಸ್ತ್ರೀ ಸರ್ಕಲ್‌ನಲ್ಲಿ ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘ (ಸಿಐಟಿಯು) ಕುಂದಾಪುರ ವತಿಯಿಂದ ಹಂಚು ಉದ್ಯಮಕ್ಕೆ ಬೇಕಾದ ಜೇಡಿ‌ಮಣ್ಣನ್ನು ತೆಗೆಯುವ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ನಡೆದ...
1 4 5 6 7 8 20
Page 6 of 20