ಮೂಡುಬಿದಿರೆ ಕಲ್ಲಬೆಟ್ಟಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ- ಕಹಳೆ ನ್ಯೂಸ್
ಮೂಡಬಿದ್ರೆ: ಕಲ್ಲಬೆಟ್ಟಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮೂಡಬಿದಿರೆ ತಹಶಿಲ್ದಾರ್ ಪುಟ್ಟರಾಜು ಡಿ.ಎ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕುವಲ್ಲಿ ಹಲವಾರು ಮಹಾತ್ಮರ ಬಲಿದಾನ ಹಾಗೂ ತ್ಯಾಗದ ಸಂದೇಶವನ್ನು ಸ್ಮರಿಸಿಕೊಳ್ಳುವುದರ ಜತೆಗೆ ನಮ್ಮಲ್ಲಿ ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಕರ್ನಾಟಕ ರಾಜ್ಯ ಸರಕಾರದ ಮಾಜಿ ಸಚಿವರು ಹಾಗೂ ಸಂಸ್ಥೆಯ ಗೌರವ ಅಧ್ಯಕ್ಷರಾದ ಅಭಯಚಂದ್ರ ಜೈನ್ ಮಾತನಾಡುತ್ತಾ...







