ಎಕ್ಸಲೆಂಟ್ ಸಿಬಿಎಸ್ಇ ಕಿಂಡರ್ ಗಾರ್ಟನ್ ಪುಟಾಣಿ ವಿದ್ಯಾರ್ಥಿಗಳಿಗೆ ‘ಚಿಣ್ಣರ ಪ್ರಶಸ್ತಿ ಪ್ರಧಾನ ಸಮಾರಂಭ’-ಕಹಳೆ ನ್ಯೂಸ್
ಮೂಡುಬಿದಿರೆ: ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಯುಕೆಜಿ ತರಗತಿಯ ಪುಟಾಣಿ ವಿದ್ಯಾರ್ಥಿಗಳಿಗೆ ' ಚಿಣ್ಣರ ಪ್ರಶಸ್ತಿ ಪ್ರಧಾನ ' ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭವನ್ನು ಪುಟಾಣಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೂಡಬಿದಿರೆಯ ಖ್ಯಾತ ಮಕ್ಕಳ ತಜ್ಞ ಡಾಕ್ಟರ್. ಟಿ. ವಸಂತ್ ರವರು ಉಪಸ್ಥಿತಿಯಲ್ಲಿದ್ದು ಮಕ್ಕಳ ಮನಸ್ಸು ಸೂಕ್ಷ್ಮವಾದುದು, ಎಳೆಯ ವಯಸ್ಸಿನಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾದ ಎಲ್ಲಾ ಚೌಕಟ್ಟನ್ನು ರೂಪಿಸುವ ಜವಾಬ್ದಾರಿ ಪ್ರತಿಯೊಬ್ಬ...







