ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಡ್ಕಿದು ಒಕ್ಕೂಟದ ತ್ರೈಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ -ಕಹಳೆ ನ್ಯೂಸ್
ಮಾಣಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ ವಲಯದ ಇಡ್ಕಿದು ಒಕ್ಕೂಟದ ತ್ರೈಮಾಸಿಕ ಸಭೆಯು ಜೂಲೈ 5 ರವಿವಾರ ಕಂಬಳಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ದೇಜಪ್ಪ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಯೋಜನೆಯಯಿಂದ ಗುಂಪುಗಳಿಗೆ ನೀಡಲಾಗುವ ಸಾಲ ಸೌಲಭ್ಯಗಳು, ಆರೋಗ್ಯ ವಿಮೆ ಹಾಗೂ ಪ್ರಸಕ್ತ ಸಾಲಿನಲ್ಲಿ...






