ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ- ಕಹಳೆ ನ್ಯೂಸ್
ಬಂದಾರು : ಬಂದಾರು ಗ್ರಾಮ ಮೈರೋಳ್ತಡ್ಕ ದ.ಕ.ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಡಿ.13 ರಂದು ಶಾಲಾ ವಠಾರದಲ್ಲಿ ನೆರವೇರಿತು. ಉದ್ಯಮಿಗಳಾದ ಕಿರಣ್ ಚಂದ್ರ ಪುಷ್ಪಗಿರಿ ಇವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ಶಾಲಾ ಕೊಠಡಿ ನೀಲ ನಕಾಶೆ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾದ ಕೃಷ್ಣಯ್ಯ...







