ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ : ನೂತನ ಜಿಲ್ಲಾಧ್ಯಕ್ಷರಾಗಿ ಈಶ್ವರ ವಾರಣಾಶಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜ್ಯೋತಿ ಪ್ರಕಾಶ್ ಪುಣಚ ಆಯ್ಕೆ-ಕಹಳೆನ್ಯೂಸ್
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್ ಮಹಲ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ತಾರನಾಥ ಗಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ದಕ್ಷಿಣ ಕನ್ನಡ ಜಿಲ್ಲಾ ಗೌರವಾಧ್ಯಕ್ಷರಾದ ಹರೀಶ್ ಬಂಟ್ವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾನುಟ್ ಜೆ ಪಿಂಟೊ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷರಾದ ರಾಮ್‌ದಾಸ್ ಶೆಟ್ಟಿ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್...






