Monday, June 15, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‍ನಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ- ಕಹಳೆ ನ್ಯೂಸ್

ಪುತ್ತೂರು: ಮಕ್ಕಳಿಗೆ ಪಠ್ಯ ಪ್ರವಚನಗಳೊಂದಿಗೆ ಕ್ರೀಡೆಯ ಅಗತ್ಯವಿದೆ. ಕ್ರೀಡೆಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಂಡಷ್ಟು ಮಕ್ಕಳ ಬೌದ್ಧಿಕ ಮತ್ತು ಶಾರೀರಿಕ ವಿಕಸನವಾಗಲು ಸಾಧ್ಯ. ವಾಲಿಬಾಲ್, ತ್ರೋಬಾಲ್, ಕಬಡ್ಡಿ ಮುಂತಾದ ಕ್ರೀಡೆಗಳು ನಮ್ಮ ಹಳ್ಳಿಗಳಿಂದ ಬಂದಿರುವಂತಹುದು. ಇದಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಮಕ್ಕಳು ಶಾಲಾ ಕಾಲೇಜಿಗಳಲ್ಲಿ ಸ್ಪರ್ಧೆಗಳನ್ನು ಇಟ್ಟಾಗ ಅತೀಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೇತ್ರಾವತಿ ನದಿಗೆ ಸ್ನಾನ ಮಾಡಲು ತೆರಳಿದ್ದ ಯುವಕ ಮೃತ್ಯು – ಕಹಳೆ ನ್ಯೂಸ್

ಬೆಳ್ತಂಗಡಿ: ಸಹೋದರ ಸಂಬಂಧಿಯೊಂದಿಗೆ ನೇತ್ರಾವತಿ ನದಿಗೆ ಸ್ನಾನ ಮಾಡಲು ತೆರಳಿದ್ದ ಕಬಕದ ನಿವಾಸಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ಆದಿತ್ಯವಾರ ಸಂಜೆ ನಡೆದಿದೆ. ಪುತ್ತೂರು ಕಬಕ ನಿವಾಸಿಯಾಗಿರುವ ಕಿರಣ್ (20)ಎಂಬಾತ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಾಗ ಈ ಘಟನೆ ನಡೆದಿದ್ದು, ಭಾನುವಾರ ಸಂಜೆಯಿಂದ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ತಡರಾತ್ರಿ ವರೆಗೂ ಕಾರ್ಯಾಚರಣೆ ನಡೆಸಿದರೂ ಯುವಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ದೇರಾಜೆಬೆಟ್ಟ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕಕ್ಕೆ ಚಾಲನೆ, ವೈಭವದ ಹೊರೆಕಾಣಿಕೆ ಮೆರವಣಿಗೆ – ಕಹಳೆ ನ್ಯೂಸ್

ಬೆಳ್ತಂಗಡಿ: ಮರೋಡಿ ಗ್ರಾಮದ ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮಕುಂಭಾಭಿಷೇಕ ಮತ್ತು ನೇಮೋತ್ಸವದ ಪ್ರಥಮ ದಿನವಾದ ಶನಿವಾರ ವಿವಿಧ ಧಾರ್ಮಿಕ ವಿಧಿವಿಧಾನಗಳು ಮತ್ತು ಮರೋಡಿ ಶಾಂತಿನಗರ ಅರುಣೋದಯ ಮೈದಾನದಿಂದ ದೇರಾಜೆಬೆಟ್ಟಕ್ಕೆ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಕ್ಷೇತ್ರದ ಬ್ರಹ್ಮಕುಂಭಾಭಿಷೇಕ ಸಮಿತಿ ಅಧ್ಯಕ್ಷ ಕೆ.ಹೇಮರಾಜ್ ಬೆಳ್ಳಿಬೀಡು ಮೆರವಣಿಗೆಗೆ ಚಾಲನೆ ನೀಡಿದರು. ಹತ್ತಾರು ವಾಹನಗಳಲ್ಲಿ ಹಸಿರುವಾಣಿ ಸಮರ್ಪಿಸಲಾಯಿತು. ಮಹಿಳೆಯರು ಕಳಸ ಹೊತ್ತು ಸಾಗಿದರು. ವಿವಿಧ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ವೈಭವ ದಿಂದ ನಡೆದ ಶ್ರೀ ಮನ್ಮಹಾರಥೋತ್ಸವ- ಕಹಳೆ ನ್ಯೂಸ್

ಬೆಳ್ತಂಗಡಿ: ಪುರಾಣ ಪ್ರಸಿದ್ಧ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಶನಿವಾರ ಅದ್ದೂರಿಯಾಗಿ ಜರಗಿತು. ಶ್ರೀ ದೇವರ ಉತ್ಸವ, ಶ್ರೀ ಮನ್ಮಹಾರಥೋತ್ಸವ, ಬೂತಬಲಿ , ಕವಾಟ ಬಂಧನ ಸಾರ್ವಜನಿಕ ಮಹಾ ಅನ್ನಸಂತರ್ಪಣೆ, ಭಜನಾ ಸಂಕೀರ್ತನೆ, ಇಂದಿನ ಧಾರ್ಮಿಕ - ಸಾಂಸ್ಕೃತಿಕ ಕಾರ್ಯಕ್ರಮ ವೈಭವದಿಂದ ಜರಗಿತು. ಕೆಲ್ಲಗುತ್ತು ಸಬ್ರಬೈಲು ಕೆ.ಜಯವರ್ಮರಾಜ ಬಲ್ಲಾಳ್ ಹಾಗೂ ಸಹೋದರ ಸಹೋದರಿಯರು ಮತ್ತು ಕುಟುಂಬಸ್ಥರು ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಹಿತ ಅನೇಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ – ಕಹಳೆ ನ್ಯೂಸ್

ಬಂದಾರು: ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮೈರೋಳ್ತಡ್ಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಮಹೇಶ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಮೇಲ್ವಿಚಾರಕಿ ಸುಲೋಚನಾ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಂಗಾಧರ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರು...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಹಿಜಾಬ್ ವಿವಾದ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜು ಸುತ್ತ ಫೆ.26 ರವರೆಗೆ ನಿಷೇಧಾಜ್ಞೆ :ಜಿಲ್ಲಾಧಿಕಾರಿ ಆದೇಶ– ಕಹಳೆ ನ್ಯೂಸ್

ಮಂಗಳೂರು : ಹಿಜಬ್ ವಿವಾದ ಇನ್ನೂ ಮುಗಿಯದ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ಫೆಬ್ರವರಿ 26ರ ಸಂಜೆ 6ರವರೆಗೆ ನಿಷೇಧಾಜ್ಞೆ ವಿಸ್ತರಿಸುವಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಹಿಜಬ್ ವಿವಾದ ತೀವ್ರಗೊಂಡಿದ್ದು, ಕಾಲೇಜು ಮುಂಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ- ಕಹಳೆ ನ್ಯೂಸ್

ಬೆಳ್ತಂಗಡಿ: ಪುರಾಣ ಪ್ರಸಿದ್ಧ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ 7ನೇ ದಿನ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವದ ವರ್ಧಂತಿ ಯ ಪ್ರಯುಕ್ತ ಫೆ.18 ರಂದು ಬೆಳಿಗ್ಗೆ ಗಣಹೋಮ, ಶತರುದ್ರಾಭಿಷೇಕ , ಮಧ್ಯಾಹ್ನ ಪ್ರಸನ್ನ ಪೂಜೆ, ಅನ್ನಸಂತರ್ಪಣೆ , ರಾತ್ರಿ ಶ್ರೀ ದೇವರ ಬಲಿ ಉತ್ಸವ, ಪಲ್ಲಕ್ಕಿ ಉತ್ಸವ, ಚಂದ್ರಮAಡಲೋತ್ಸವ , ಅಶ್ವಥಕಟ್ಟೆ ಪೂಜೆ, ರಂಗಪೂಜೆ ಇತ್ಯಾದಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು . ಈ ಸಂದರ್ಭದಲ್ಲಿ ಅನುವಂಶಿಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿವಾಹಿತ ಮಹಿಳೆಯರ ಜೊತೆ ರಾಧಾಕೃಷ್ಣನ ರಾಸಲೀಲೆ : ಕಾಮುಕ ಅಂದರ್ – ಕಹಳೆ ನ್ಯೂಸ್

ಬಂಟ್ವಾಳ: ಸಂಬAಧಿಕರ ಮಹಿಳೆಯರ ಜೊತೆ ರಾಸಲೀಲೆ ಮಾಡಿದ ಬಳಿಕ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಾಮುಕನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ಮಂಡಾಡಿ ನಿವಾಸಿ ರಾಧಾಕೃಷ್ಣ ಬಂಧಿತ ಆರೋಪಿ. ಬಂಟ್ವಾಳ ಬಿ.ಕಸ್ಬಾ ಗ್ರಾಮದ ನಿತ್ಯಾನಂದ ನಗರದ ಮಹಿಳೆಯೋರ್ವಳ ನಗ್ನ ಪೋಟೋಗಳನ್ನು ವಾಟ್ಸ್ ಆಪ್ ಗ್ರೂಪ್ ಗಳಲ್ಲಿ ಶೇರ್ ಮಾಡಿದ್ದಾನೆ ಎಂದು ಆರೋಪಿಸಿ ಮಹಿಳೆಯ ಗಂಡ ನಗರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಈ ಪ್ರಕರಣ ಬೆನ್ನು...
1 657 658 659 660 661 887
Page 659 of 887