ನರೇಂದ್ರ ಪ.ಪೂ.ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ‘ಪ್ರೇರಣಾ’-ಉದ್ಘಾಟನೆ -ಕಹಳೆ ನ್ಯೂಸ್
ಸಾಧನೆಯ ಹಾದಿ ಸುಗಮವಲ್ಲ. ಛಲವಿದ್ದವರು ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ. ಮರಳಿ ಯತ್ನವ ಮಾಡು ಎಂಬ ಮಾತಿನಂತೆ ನಿರಂತರ ಪ್ರಯತ್ನದಿಂದ ಮಾತ್ರ ಯಶಸ್ಸು ಸಿಗಬಲ್ಲದು ಎಂದು ರಾಮಕೃಷ್ಣ ಪ್ರೌಢಶಾಲೆಯ ಮುಖ್ಯಶಿಕ್ಷಕಿಯಾದ ಶ್ರೀಮತಿ ಜಯಲಕ್ಷ್ಮಿ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಎರಡು ದಿನಗಳ ವ್ಯಕ್ತಿತ್ವ ವಿಕಸನ ಕಾರ್ಯಾಗಾರ “ಪ್ರೇರಣಾ” ವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಯುವ ಪೀಳಿಗೆಗೆ ಮನಸ್ಸನ್ನು ದೃಢಗೊಳಿಸುವುದರ ಜೊತೆಗೆ ಸದೃಢ ಭವಿಷ್ಯದ ನಿರ್ಮಾಣಕ್ಕಾಗಿ...







