ಇಂದು ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ರಾಜ್ಯಪಾಲರು ಭೇಟಿ ; ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ ಬಳಿಕ ಸರ್ವಧರ್ಮ ಸಮ್ಮೇಳನದ ಉದ್ಘಾಟನೆ – ಕಹಳೆ ನ್ಯೂಸ್
ಮಂಗಳೂರು, ಡಿ 02 : ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರು ಇದೇ ಡಿ.2 ರಿಂದ 5ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. 2021ರ ಡಿಸೆಂಬರ್ 2ರ ಗುರುವಾರ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಬೆಳಿಗ್ಗೆ 10.50ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ಅವರು 12.30ಕ್ಕೆ ಧರ್ಮಸ್ಥಳಕ್ಕೆ ತೆರಳಿ, 12.45ಕ್ಕೆ ಸನ್ನಿಧಿ ಗೆಸ್ಟ್ ಹೌಸ್‌ಗೆ ಆಗಮಿಸುವರು. 12.47ಕ್ಕೆ ಧರ್ಮಸ್ಥಳದ...







