ವಿವೇಕಾನಂದ ಮಹಾವಿದ್ಯಾಲಯದಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ- ಕಹಳೆ ನ್ಯೂಸ್
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ನೂತನ ಶಿಕ್ಷಣ ನೀತಿಯೊಂದಿಗೆ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ, ಪ್ರತಿಭಾ ಪುರಸ್ಕಾರ ಮತ್ತು ರ‍್ಯಾಂಕ್ ವಿಜೇತರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಹಿಂದೆ ಭಾರತೀಯ ಸಂಸ್ಕøತಿ, ಸಂಸ್ಕಾರದೊಂದಿಗೆ ಜೀವನಕ್ರಮ ಅವಿನಾಭಾವ ಸಂಬಂಧವನ್ನು ಹೊಂದಿತ್ತು. ಗುರುಕುಲ ಪದ್ಧತಿಯ ಮೂಲಕ ಶಿಕ್ಷಣವು ಎಲ್ಲಾ ವರ್ಗದ ಜನರಿಗೂ ಸಮಾನವಾಗಿ ಲಭ್ಯವಿತ್ತು. ತನ್ನ ಕಾಲಮೇಲೆ ತಾನು ನಿಂತುಕೊಳ್ಳುವಂತಹ ಶಕ್ತಿಯನ್ನು...







