ಅಕ್ರಮ ಕೋಳಿ ಅಂಕದ ಅಡ್ಡೆಗೆ ದಾಳಿ – 6 ಮಂದಿ ಅರೆಸ್ಟ್ -ಕಹಳೆ ನ್ಯೂಸ್
ಮಂಗಳೂರು : ಅಕ್ರಮ ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದರೆಯಲ್ಲಿ ನಡೆದಿದೆ. ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಪ್ರದೇಶದಲ್ಲಿ ಮಾರ್ಚ್ 18 ರಂದು, ಜಾತ್ರೆ ಮುಗಿದ ಬಳಿಕ ಕೆಲವು ವ್ಯಕ್ತಿಗಳು ಅಕ್ರಮವಾಗಿ ಸೇರಿಕೊಂಡು ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಮಾಹಿತಿ ದೊರಕಿತ್ತು. ಕೋಳಿಗಳಿಗೆ ಹರಿತವಾದ ಬಾಳುಗಳನ್ನು ಕಟ್ಟಿ, ಹಿಂಸಾತ್ಮಕವಾಗಿ ಕಾದಾಡಲು...





