Saturday, June 13, 2026

ಪ್ರಾದೇಶಿಕ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪುತ್ತೂರಿನ ದರ್ಬೆಯ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ; ಕೇಸ್ ದಾಖಲಾಗಿ ಕೆಲವೇ ಗಂಟೆಗಳಲ್ಲಿ ಕಾಮುಕ ಪಿಂಟೋನ ಹೆಡೆಮುರಿಕಟ್ಟಿದ ದಕ್ಷ ಅಧಿಕಾರಿ ತಿಮ್ಮಪ್ಪ ನಾಯಕ್ – ಕಹಳೆ ನ್ಯೂಸ್

ಪುತ್ತೂರು : ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ದರ್ಬೆಯ ಪ್ರತಿಷ್ಠಿತ ಖಾಸಗಿ ಕ್ರಿಶ್ಚಿಯನ್ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸೊ ಪ್ರಕರಣದಲ್ಲಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ದರ್ಬೆಯ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.೨೩ರಂದು ಲೈಂಗಿಕ ಕಿರುಕುಳ ನೀಡಿದ್ದು ಆಕೆ ಈ ವಿಚಾರವನ್ನು...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ-  ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಂಡು ಮುಂದಿನ ಜೀವನಕ್ಕೆ ಅಗತ್ಯವಿರುವ ಭದ್ರ ಬುನಾದಿಯನ್ನು ಹಾಕಿಕೊಳ್ಳಬೇಕು. ಪರಿಶ್ರಮ ಮತ್ತು ಪ್ರಾಮಾಣಿಕತೆಯ ಪ್ರತಿನಿಧಿಗಳಾಗಬೇಕು. ಉತ್ತಮ ವ್ಯಕ್ತಿತ್ವ ಮತ್ತು ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಜಗತ್ತಿಗೆ ಹೊಸ ಬೆಳಕು ನೀಡಬೇಕು ಎಂದು ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ದಿನೇಶ್ ಶೆಣೈ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ 2021-22 ಸಾಲಿನ ವಿದ್ಯಾರ್ಥಿ ಸಂಘ, ವಿಜ್ಞಾನ, ವಾಣಿಜ್ಯ, ಸಾಹಿತ್ಯ, ಕ್ರೀಡಾಸಂಘ ಮತ್ತು ಇಕೋ ಕ್ಲಬ್‌ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಮ್ಮತದಿಂದ...
ಪುತ್ತೂರು

ಅಂಬಿಕಾ ಮಹಾವಿದ್ಯಾಲಯದಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳ ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ಇಂಗ್ಲಿಷ್ ವಿಭಾಗದ ವತಿಯಿಂದ ಆಯೋಜಿಸಲಾದ ‘ಸ್ಪೋಕನ್ ಇಂಗ್ಲಿಷ್ ತರಗತಿ’ಗಳನ್ನು ಉದ್ಘಾಟಿಸಿ ಮಾತನಾಡಿದ, ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಆಂಗ್ಲ ಭಾಷಾ ಉಪನ್ಯಾಸಕ ರಾಮಚಂದ್ರ ಭಟ್ ಎನ್.ಕೆ., ಭಾಷೆಯೊಂದನ್ನು ಕಲಿಯಲು ಬಯಸುವ ವಿದ್ಯಾರ್ಥಿಗಳು ಅತ್ಯುತ್ತಮ ಕೇಳುಗರಾಗಿರಬೇಕು. ಹೆಚ್ಚು ಹೆಚ್ಚು ಕೇಳಿದಷ್ಟೂ ಭಾಷೆಯ ಬಗೆಗಿನ ಅರಿವು ನಮ್ಮೊಳಗೆ ಮೂಡುವುದಕ್ಕೆ ಸಾಧ್ಯ. ಆದ್ದರಿಂದ ನಮ್ಮ ಕಿವಿಗಳು ಎಷ್ಟು ಪರಿಣಾಮಕಾರಿಯಾಗಿ ಆಲಿಸುತ್ತವೆ ಎಂಬುದರ...
ಬಂಟ್ವಾಳ

ಮಿನಿವಿಧಾನ ಸೌಧದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು- ಕಹಳೆ ನ್ಯೂಸ್

ಬಂಟ್ವಾಳ :ಮಿನಿ ವಿಧಾನ ಸೌಧದಲ್ಲಿ ಕಾರ್ಯಚರಿಸುತ್ತಿರುವ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಂದಾಯ ಇಲಾಖೆಗೆ ಸಂಬಂಧಪಟ್ಟ ಅಹವಾಲಗಳನ್ನು ತಾಲೂಕು ತಹಶೀಲ್ದಾರ್ ಹಾಗೂ ಇಲಾಖಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಬಂಟ್ವಾಳನ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸ್ವೀಕರಿಸಿ, ಸಮಸ್ಯೆಯ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗಿನಿಂದ ಸಂಜೆ 3 ಗಂಟೆ ವರೆಗೆ ಸಾರ್ವಜನಿಕರು ಈ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ....
ಬಂಟ್ವಾಳ

ಬರಿಮಾರು ಗ್ರಾಮದ ಮಾದುಗುರಿಯದಲ್ಲಿ ಸೋಲಾರ್ ದಾರಿದೀಪದ ಉದ್ಘಾಟನೆ – ಕಹಳೆ ನ್ಯೂಸ್

ಬರಿಮಾರು ಗ್ರಾಮದ ಮಾದುಗುರಿಯ ಸೋಲಾರ್ ದಾರಿದೀಪದ ಉದ್ಘಾಟನೆಯನ್ನು ಇಂದು ಮಂಡಲ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು ನೆರವೇರಿಸಿದರು. ಗ್ರಾಮಪಂಚಾಯತ್ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ಸದಾಶಿವ ಜಿ, ಪಂಚಾಯತ್ ಸದಸ್ಯೆ ಪುಷ್ಪಲತಾ, ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯೆ ಕಮಲಾಕ್ಷಿ ಪೂಜಾರಿ,ಬಾಳ್ತಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಪಿ ಯಸ್, ಕಾರ್ಯದರ್ಶಿ ಅಶ್ವತ್ ಬರಿಮಾರು, ತಾಲೂಕು ST ಮೋರ್ಚಾದ ಯಶವಂತ ನಗ್ರಿ ,ಬೂತ್ ಅಧ್ಯಕ್ಷ ವಸಂತ ಪೂಜಾರಿ, ಜಗದೀಶ್ ಪೂಜಾರಿ, ಸುಷ್ಮಾ ಪ್ರಭಾಕರ್,ಜಯಂತ ಮುಳಿಬೈಲು,...
ಪುತ್ತೂರು

ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿ ಮತ್ತು ಅದರ ತಯಾರಿ ಎನ್ನುವ ವಿಷಯದ ಬಗ್ಗೆ ವಿಚಾರ ಸಂಕಿರಣ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಜಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿ ಮತ್ತು ಅದರ ತಯಾರಿ ಎನ್ನುವ ವಿಷಯದ ಬಗ್ಗೆ ವಿಚಾರ ಸಂಕಿರಣವು ಐಎಸ್‍ಟಿಇ ಘಟಕದ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆಯಿತು. ಗೋಷ್ಟಿಯಲ್ಲಿ ವಿವೇಕಾನಂದ ಪದವಿ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಯೋಜಕಿ ಡಾ.ವಿಜಯ ಸರಸ್ವತಿ.ಬಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ವೈದ್ಯರುಗಳು, ಇಂಜಿನಿಯರುಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚು...
ಪುತ್ತೂರು

ನಾಳೆಯಿಂದ ಮುಳಿಯ ಜ್ಯುವೆಲ್ಸ್ ನಲ್ಲಿ “ಚಿನ್ನೋತ್ಸವದ ಸಂಭ್ರಮ”- ಕಹಳೆ ನ್ಯೂಸ್

ಪುತ್ತೂರು : ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವವು ಅ.25ರಿಂದ ನ.25ರವರೆಗೆ ಮುಳಿಯ ಜ್ಯುವೆಲ್ಸ್ ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ. 1919 ಅಂದರೆ ಕಳೆದ 100 ವರ್ಷಗಳ ಹಿಂದೆ ಚಿನ್ನದ ಬೆಲೆ 1 ಗ್ರಾಂ ಗೆ ರೂ.1 ಅಂದಾಜು ಇತ್ತು. ಮುಳಿಯ 75 ವರ್ಷಗಳ ಹಿಂದೆ ಆರಂಭವಾದಾಗ ಗ್ರಾಂ ಒಂದಕ್ಕೆ ರೂ.20/- ಇತ್ತು. ಈಗ 2020ರಲ್ಲಿ ಬೆಲೆ...
ಬಂಟ್ವಾಳ

ಅಧ್ಯಾಪಕ ರಕ್ಷಕ ಪ್ರಶಿಕ್ಷಣ ಕಾರ್ಯಗಾರದ ಸಮಾರೋಪ ಸಮಾರಂಭ – ಕಹಳೆ ನ್ಯೂಸ್

ಕಲ್ಲಡ್ಕ : ಅಧ್ಯಾಪಕ ರಕ್ಷಕ ಪ್ರಶಿಕ್ಷಣ ಕಾರ್ಯಗಾರದ ಸಮಾರೋಪ ಸಮಾರಂಭವು ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರೇರಣಾ ಸಭಾಭವನದಲ್ಲಿ ನಡೆಯಿತು. ಖ್ಯಾತ ಪಶುವೈದ್ಯರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಯಾದ ಡಾ. ಕೃಷ್ಣಭಟ್ ಕೊಂಕೋಡಿ ಮಾತನಾಡುತ್ತಾ, ಕೊರೋನದ ರಜೆಯಿಂದಾಗಿ ಜಡ ಹಿಡಿದಿರುವ ವಿದ್ಯಾರ್ಥಿಗಳ ಮನಸ್ಸನ್ನು ಚಟುವಟಿಕೆಯಾಧಾರಿತ ಶಿಕ್ಷಣದ ಮೂಲಕ ಮತ್ತೆ ಚೈತನ್ಯಗೊಳಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳ ಮನಸ್ಸನ್ನು ಪ್ರೀತಿಯ ಸಂವೇದನೆಯ ಮೂಲಕ ಹೇಗೆ ನೆನಪಿನಲ್ಲಿಡುವಂತೆ ಮಾಡಬಹುದು ಎಂಬುದನ್ನು ತಮ್ಮ ಅನುಭವಗಳನ್ನು ಉದಾಹರಣೆಯಾಗಿಸುತ್ತ ವಿವರಿಸಿದರು....
1 707 708 709 710 711 887
Page 709 of 887