Saturday, June 13, 2026

ಪ್ರಾದೇಶಿಕ

ಸುಳ್ಯ

ಬೆಳ್ಳಾರೆ ಮಸೀದಿ ಆಡಳಿತ ಮಂಡಳಿ ಚುನಾವಣೆ ವಿಚಾರದಲ್ಲಿ ತರಕಾರು : ಇತ್ತಂಡಗಳ ನಡುವೆ ಹೊಡೆದಾಟ – ಕಹಳೆ ನ್ಯೂಸ್

ಬೆಳ್ಳಾರೆ :  ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್ ಕೊಡುವ ವಿಷಯದಲ್ಲಿ ತಕರಾರು ಉಂಟಾಗಿ, ಎರಡು ತಂಡಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ. ಆಸಿರ್, ಹಾರಿಸ್, ಹಮೀದ್, ಮುನೀರ್, ಹೈದರಾಲಿ ಮತ್ತು ಮಹಮ್ಮದ್ ಅಜರುದ್ದೀನ್, ಜಮಾಲುದ್ದೀನ್ ಕೆ.ಎಸ್., ಅಬ್ದುಲ್ ಜಮಾಲ್ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ. ಹೊಡೆದಾಟದಲ್ಲಿ ಕೆಲವರಿಗೆ ಗಾಯವಾಗಿದ್ದು, ಗಾಯಾಳುಗಳ ಪೈಕಿ ಒಂದು ತಂಡದ ಅಜರುದ್ದೀನ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಇನ್ನೊಂದು ತಂಡದ ಹೈದರಾಲಿ...
ಬಂಟ್ವಾಳ

ಬಂಟ್ವಾಳ : ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಟಿಪ್ಪರ್ ಚಲಾಯಿಸಲು ಯತ್ನಿಸಿದ ಇಬ್ಬರ ಬಂಧನ- ಕಹಳೆ ನ್ಯೂಸ್

ಬಂಟ್ವಾಳ : ಟಿಪ್ಪರ್ ಚಾಲಕನೊಬ್ಬ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಟಿಪ್ಪರ್ ಚಲಾಯಿಸಲು ಯತ್ನಿಸಿದ ಘಟನೆ ಅ.19ರ ರಾತ್ರಿ ಫರಂಗಿಪೇಟೆ ಹೊರ ಠಾಣೆ ಚೆಕ್ ಪೊಸ್ಟ್ ಬಳಿ ನಡೆದಿದೆ. ಹಲ್ಲೆ ನಡೆಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರನ್ನು ಅಬ್ದುಲ್ ಐಸಾಕ್ ಮತ್ತು ಮೊಯ್ದೀನ್ ಅಝರ್ ಎಂದು ಗುರುತಿಸಲಾಗಿದೆ. ಕಾನ್ಸ್ಟೇಬಲ್ ಶೇಖರ್ ಮತ್ತು ರಾಧಾಕೃಷ್ಣ ಅವರು ಫರಂಗಿಪೇಟೆ ಹೊರ ಠಾಣೆ ಚೆಕ್ ಪೊಸ್ಟ್ ಕರ್ತವ್ಯದಲ್ಲಿದ್ದರು. ಮುಂಜಾನೆ 2.30...
ಪುತ್ತೂರುಸಂತಾಪ

ಇಹಲೋಕ ತ್ಯಜಿಸಿದ 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ನ ಪ್ರಥಮಾಧ್ಯಕ್ಷ ಅಲಿಮಾರ ವಿಶ್ವನಾಥ ರೈ- ಕಹಳೆ ನ್ಯೂಸ್

ಪುತ್ತೂರು : 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್‍ನ ಪ್ರಥಮ ಅಧ್ಯಕ್ಷ, ಕೋಡಿಂಬಾಡಿಯ ಮಾಜಿ ಮಂಡಲ ಪಂಚಾಯತ್ ಸದಸ್ಯ ಅಲಿಮಾರ ವಿಶ್ವನಾಥ ರೈ ಅ.21ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅಲಿಮಾರ ಕರಿಯಪ್ಪ ರೈ-ಅಬ್ಬಕ್ಕೆ ದಂಪತಿಯ ಮಗ ಅಲಿಮಾರ ವಿಶ್ವನಾಥ ರೈಯವರು ಧಾರ್ಮಿಕ, ರಾಜಕೀಯ, ಸಾಮಾಜಿಕ ಮತ್ತು ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು ಊರಿನ ಅಭಿವೃದ್ಧಿಗೆ ಶ್ರಮಿಸಿದ್ದವರು. ಕೋಡಿಂಬಾಡಿ ಮಂಡಲ ಪಂಚಾಯತ್ ಸದಸ್ಯರಾಗಿ ರಾಜಕೀಯ ಪ್ರವೇಶ ಮಾಡಿದ್ದ ವಿಶ್ವನಾಥ ರೈ ಯವರು 34ನೇ...
ಪುತ್ತೂರು

ಅಕ್ಷಯ ಕಾಲೇಜಿನಲ್ಲಿ ಶಿಕ್ಷಕ ಹಾಗೂ ಹೆತ್ತವರ ಸಂಘದ ವತಿಯಿಂದ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಅವರ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಅ.21ರಂದು ಶಿಕ್ಷಕ ಹಾಗೂ ಹೆತ್ತವರ ಸಂಘದ ವತಿಯಿಂದ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಹಾಗೂ ಅವರ ಹೆತ್ತವರಿಗೆ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಯಿತು. ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಶ್ರೀ ಜಯಂತ್ ನಡುಬೈಲು, ದೀಪ ಪ್ರಜ್ವಲಿಸಿ, ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಪಕ್ಕಳ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನಾಡುತ್ತಾ ವಿದ್ಯಾರ್ಥಿಗಳಿಗೆ ಕಾಲೇಜಿನ ಚಟುವಟಿಕೆ, ನಿಯಮಾವಳಿಗಳ ಬಗ್ಗೆ ವಿಸ್ತಾರವಾಗಿ ವಿವರಿಸಿದರು....
ಪುತ್ತೂರು

ಬಾಂಗ್ಲಾದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂದುಗಳ ಹತ್ಯೆಯನ್ನು ಖಂಡಿಸಿ, ಹಿಂದುಗಳ ರಕ್ಷಣೆಗೆ ಆಗ್ರಹಿಸಿ ವಿಶ್ವ ಹಿಂದು ಪರಿಷದ್ ಪುತ್ತೂರು ವತಿಯಿಂದ ಸಹಾಯಕ ಆಯುಕ್ತರಿಗೆ ಮನವಿ – ಕಹಳೆ ನ್ಯೂಸ್

ಪುತ್ತೂರು : ಬಾಂಗ್ಲಾದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂದುಗಳ ಹತ್ಯೆ, ಹಿಂದು ದೇವಸ್ಥಾನಗಳ ಧ್ವಂಸ ಹಾಗು ಹಿಂದು ಉತ್ಸವಗಳ ಮೇಲಿನ ದಾಳಿಯನ್ನು ಖಂಡಿಸಿ, ಅಲ್ಲಿನ ಹಿಂದುಗಳನ್ನು ರಕ್ಷಿಸಲು ಕೇಂದ್ರ ಸರಕಾರ ತಕ್ಷಣದಿಂದಲೇ ಕಾರ್ಯ ಪ್ರವೃತ್ತರಾಗಬೇಕೆಂದು ಆಗ್ರಹಿಸಿ ವಿಶ್ವ ಹಿಂದು ಪರಿಷದ್ ಪುತ್ತೂರು ಜಿಲ್ಲೆ ವತಿಯಿಂದ ಸಹಾಯಕ ಆಯುಕ್ತರು ಹಾಗು ರಾಜ್ಯಪಾಲರ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿಶ್ವ ಹಿಂದು ಪರಿಷದ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ಕಾರ್ಯದರ್ಶಿ...
ಪುತ್ತೂರು

ಬಡಗನ್ನೂರಿನ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ ವಿರೋಧಿಸಿ ದಲಿತ ಸಂಘಟನೆಯಿಂದ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ಬಡಗನ್ನೂರಿನಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ, ಗರ್ಭಧರಿಸಿ ಮಗುವಿಗೆ ಜನ್ಮ ನೀಡಲು ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಮತ್ತು ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಯಿತು. ದರ್ಬೆ ವೃತ್ತದ ಬಳಿಯಿಂದ ಪ್ರತಿಭಟನಾಕಾರರು ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಸಂಪ್ಯ...
ಪುತ್ತೂರು

ಬಂಟ್ವಾಳ ತಾಲೂಕು ಆರೋಗ್ಯ ಕೇಂದ್ರದಲ್ಲಿ ನೂತನ 108 ಎಡ್ವಾನ್ಸ್ ಲೈಫ್ ಸಫೋರ್ಟ್ ಅಂಬ್ಯುಲೆನ್ಸ್ ವಾಹನ ಲೋಕಾರ್ಪಣೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ಆರೋಗ್ಯ ಕೇಂದ್ರದಲ್ಲಿ ನೂತನ 108 ಎಡ್ವಾನ್ಸ್ ಲೈಫ್ ಸಫೋರ್ಟ್ ಅಂಬ್ಯುಲೆನ್ಸ್ ವಾಹನವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಲೋಕಾರ್ಪಣೆ ಮಾಡಿದರು. ವೆಂಟಿಲೇಟರ್, ಕಾರ್ಡಿಕ್ ಮೋನಿಟರ್, ಇಸಿಜಿ, ಆಕ್ಸಿಜನ್ ಸೌಲಭ್ಯಗಳನ್ನು ಹೊಂದಿರುವ ತಾಲೂಕಿನಲ್ಲೇ ಪ್ರಥಮ ವಾಹನ ಇದಾಗಿದ್ದು ತುರ್ತು ಸಂಧರ್ಭದಲ್ಲಿ ಸಾರ್ವಜನಿಕರಿಗೆ ಇದರಿಂದ ಹೆಚ್ಚಿನ ಪ್ರಯೋಜನ ಲಭಿಸಲಿದೆ. ಈ ಸಂಧರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ದೀಪಾ ಪ್ರಭು, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, 108 ತುರ್ತು ವಾಹನಗಳ ಜಿಲ್ಲಾ...
ಬಂಟ್ವಾಳ

ಹಿಂದೂ ದೇವಸ್ಥಾನಗಳನ್ನು ಒಡೆದು ಹಾಕುತ್ತಿರುವ ಜಿಹಾದಿಗಳ ವಿರುದ್ಧ ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ವತಿಯಿಂದ ಪ್ರತಿಭಟನೆ- ಕಹಳೆ ನ್ಯೂಸ್

ಬಂಟ್ವಾಳ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ದೇವಸ್ಥಾನಗಳನ್ನು ಒಡೆದು ಹಾಕುತ್ತಿರುವ ಜಿಹಾದಿ ರೋಹಿಂಗ್ಯಾ ಮುಸಲ್ಮಾನರ ವಿರುದ್ಧ ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಅಶೋಕ್ ಶೆಟ್ಟಿ ಸರಪಾಡಿ ಬಾಂಗ್ಲಾದೇಶದಲ್ಲಿ ಹಿಂದುಗಳು ಅನುಭವಿಸುತ್ತಿರುವ ಕಷ್ಟವನ್ನು ಹಾಗೂ ಅವರಿಗೆ ಯಾವ ರೀತಿ ಕಷ್ಟ ಕೊಡುತ್ತಿದ್ದಾರೆ ಅನ್ನೋದನ್ನು ಕಾರ್ಯಕರ್ತರಿಗೆ ತಿಳಿ ಹೇಳಿದರು. ಪ್ರತಿಭಟನೆಯಲ್ಲಿ ಪುತ್ತೂರು ಜಿಲ್ಲಾ ಸಹಸಂಚಾಲಕರಾದ ಗುರುರಾಜ್ ಬಂಟ್ವಾಳ ಶಿವಪ್ರಸಾದ್ ತುಂಬೆ, ಸಂತೋμï...
1 709 710 711 712 713 887
Page 711 of 887