ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ- ಕಹಳೆ ನ್ಯೂಸ್
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2020-21 ನೇ ಶೈಕ್ಷಣಿಕ ವರ್ಷದ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗಣೇಶ್ ಬದುಕಿನಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡಾಗ ಜೀವನದ ಪಯಣ ಸುಗಮವಾಗುತ್ತದೆ. ಎದುರಾಗುವ ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸುವಲ್ಲಿ ವ್ಯಕ್ತಿತ್ವದ ಗಟ್ಟಿತನ ಪ್ರಕಟಗೊಳ್ಳುತ್ತದೆ. ಧೈರ್ಯವನ್ನು ಕಳೆದುಕೊಳ್ಳದೆ ಛಲದಿಂದ ಮುನ್ನಡೆದರೆ ವ್ಯಕ್ತಿ ಮೌಲ್ಯದ ಉತ್ತಮ ಪ್ರತಿನಿಧಿಯಾಗಿ ಮೂಡಿ ಬರಲು ಸಾಧ್ಯವಾಗುತ್ತದೆ. ಉತ್ತಮ ಅಂಕಗಳನ್ನು ರ್ಯಾಂಕ್‍ಗಳನ್ನು ಗಳಿಸುವುದು...







