ವಿಟ್ಲ ಪೊಲೀಸ್ ಠಾಣಾ ಎಸ್.ಐ ಮೇಲೆ ಗುಂಡು ಹಾರಿಸಿ ಕೊಲೆ ಯತ್ನ ಪ್ರಕರಣ: ನ್ಯಾಯಾಂಗ ಬಂಧನದಲ್ಲಿದ್ದ ಓರ್ವ ಆರೋಪಿಗೆ ಷರತ್ತುಬದ್ಧ ಜಾಮೀನು-ಕಹಳೆ ನ್ಯೂಸ್
ಪುತ್ತೂರು: ಕಳೆದ ಮಾರ್ಚ್ ತಿಂಗಳಲ್ಲಿ ವಿಟ್ಲ ಪೊಲೀಸ್ ಠಾಣಾ ಎಸ್.ಐ ಮೇಲೆ, ಗುಂಡು ಹಾರಿಸಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳ ಪೈಕಿ, ಕೇರಳ ರಾಜ್ಯದ ಉಪ್ಪಳದ ಹೈದರ್ ಎಂಬವನಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿ ಬಿಡುಗಡೆಗೊಳಿಸಿದೆ. ಕಳೆದ ಮಾರ್ಚ್ 25ರಂದು ಬೆಳಗಿನ ಜಾವ 4:00 ಗಂಟೆಗೆ ಬಂಟ್ವಾಳ ತಾಲೂಕು ಬಾಕ್ರಬೈಲು ಕಡೆಯಿಂದ, ಸಾಲೆತ್ತೂರು ಕಡೆಗೆ ಬರುತ್ತಿದ್ದ ಬಿಳಿ ಬಣ್ಣದ ಕಾರನ್ನು...







