ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕೌಶಲ್ಯಗಳು ಮತ್ತು ಯಶಸ್ಸಿನ ಲಕ್ಷಣದ ಬಗ್ಗೆ ಮಾಹಿತಿ ಕಾರ್ಯಾಗಾರ ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು- ವಂದನಾ ಶಂಕರ್-ಕಹಳೆ ನ್ಯೂಸ್
ಪುತ್ತೂರು: ಸೋಲು ಮತ್ತು ಗೆಲುವು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಜೀವನದಲ್ಲಿ ಯಶಸ್ಸನ್ನು ಗಳಿಸಬೇಕು ಎಂದರೆ ಸೋಲು ಮತ್ತು ಗೆಲುವು ಅನ್ನು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಕ್ಯಾಂಪಸ್ ನಿರ್ದೇಶಕರಾದ ವಂದನಾ ಶಂಕರ್ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಕೌಶಲ್ಯಗಳು ಮತ್ತು ಯಶಸ್ಸಿನ ಲಕ್ಷಣ (Skills and Attributes to success) ಎಂಬ ಮಾಹಿತಿ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ...







