ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕ ಕ್ರೀಡೋತ್ಸವ – ಕಹಳೆ ನ್ಯೂಸ್
ಪಟ್ಟೆ ಬಡಗನ್ನೂರು - ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಶಾಲಾ ವಾರ್ಷಿಕ ಕ್ರೀಡೋತ್ಸವ ಜರಗಿತು. ಕ್ರೀಡಾಕೂಟದ ಶಾಲಾ ಧ್ವಜಾರೋಹಣವನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ನೆರವೇರಿಸಿದರು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದ ವಂದನೆಯನ್ನು ಸ್ವೀಕರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕ್ರೀಡಾಕೂಟದಲ್ಲಿ ಸೋಲೆ ಗೆಲುವಿನ ಸೋಪಾನ ಎಲ್ಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು...







