ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುತ್ತಿರುವ ಸುರಭಿ ಗೋಶಾಲೆ ದೇರ್ಲದಲ್ಲಿ ದೀಪಾವಳಿ ಗೋಪೂಜೆ ಆಚರಣೆ-ಕಹಳೆ ನ್ಯೂಸ್
ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುತ್ತಿರುವ ಸುರಭಿ ಗೋಶಾಲೆ ದೇರ್ಲ ಇಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ದೀಪಾವಳಿ ಗೋಪೂಜೆ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಕಲೆಯ ಮೇಲೆ ಅತೀವ ಆಸಕ್ತಿಯನ್ನು ಹೊಂದಿರುವ ದ್ವಾರಕಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಇವರು ಈ ಬಾರಿಯ ದೀಪಾವಳಿ ಗೋಪೂಜೆಯ ಸಂದರ್ಭದಲ್ಲಿ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಕಲಾದೀಪ ವಿದ್ವಾನ್ ದೀಪಕ್ ಕುಮಾರ್ ಅವರ ನಿರ್ದೇಶನದಲ್ಲಿ ಸುರಭಿ ಕಲಾವಲ್ಲರೀ ಎಂಬ ಶಾಸ್ತ್ರೀಯ...







