ನಾಳೆ ಉಪ್ಪಿನಂಗಡಿ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ ; ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್‌ರಿಂದ ಪದಪ್ರಧಾನ – ಕಹಳೆ ನ್ಯೂಸ್
ಉಪ್ಪಿನಂಗಡಿ: ರೋಟರಿ ಕ್ಲಬ್ ಉಪ್ಪಿನಂಗಡಿ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 10ರಂದು ಉಪ್ಪಿನಂಗಡಿ ರೋಟರಿ ಸಮುದಾಯ ಭವನದಲ್ಲಿ ಜರಗಲಿದೆ ಎಂದು ಉಪ್ಪಿನಂಗಡಿ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ರವೀಂದ್ರ ದರ್ಭೆ ತಿಳಿಸಿದರು. ಅವರು ಉಪ್ಪಿನಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಮಾತನಾಡಿ, ರೋಟರಿ ವಲಯ-4ರ ಸಹಾಯಕ ಗವರ್ನರ್ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಪದಪ್ರಧಾನ ಮಾಡಲಿದ್ದಾರೆ. ರೋಟರಿ ವಲಯ ಸೇನಾನಿ ಜೆರೋಮಿಯಸ್ ಪಾಯಸ್, ಮಾತೃ ಘಟಕವಾದ ಪುತ್ತೂರು...







