ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಬಾಲಿವುಡ್ ನಟ ಅರ್ಜುನ್ ಕಪೂರ್: ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಕೆ – ಕಹಳೆ ನ್ಯೂಸ್
ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ಸ್ಟಾರ್ ನಟ ಅರ್ಜುನ್ ಕಪೂರ್ ಭೇಟಿ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿದ್ದ ಅವರು, ವಿವಿಧ ವಿಶೇಷ ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಶನಿವಾರವೇ ಕ್ಷೇತ್ರಕ್ಕೆ ಆಗಮಿಸಿದ್ದ ಅರ್ಜುನ್ ಕಪೂರ್, ಭಾನುವಾರ ಅತ್ಯಂತ ಫಲದಾಯಕವೆಂದು ನಂಬಲಾದ ‘ಸರ್ಪ ಸಂಸ್ಕಾರ’ ಸೇವೆಯನ್ನು ನೆರವೇರಿಸಿದರು. ಸೋಮವಾರ ಬೆಳಿಗ್ಗೆ ನಡೆದ...







