ಹೊಳೆಯಲ್ಲಿ ಮುಳುಗಿ ಸಹೋದರಿಯರ ಸಾವು –ಕಹಳೆ ನ್ಯೂಸ್
ಹೊಳೆಯಲ್ಲಿ ಮುಳುಗಿ ಸಹೋದರಿಯರು ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಪ ಸಮೀಪದ ಕೇನ್ಯದ ಕನ್ಕಲ್ ಕುಮಾರಧಾರಾ ನದಿಯ ಪೆಲತಗುಂಡಿಯಲ್ಲಿ ಸಂಭವಿಸಿದೆ. ಮೂಲತಃ ಬಳ್ಪದ ಕನ್ಕಲ್ ನವರಾದ ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ (15) ಹಾಗೂ ಆವಂತಿಕಾ (11) ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಮಕ್ಕಳು. ರಾತ್ರಿ ವೇಳೆ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹ ಪತ್ತೆ ಹಚ್ಚಿ ನದಿಯಿಂದ ಹೊರ...







