Friday, March 6, 2026

ಸುಳ್ಯ

ದಕ್ಷಿಣ ಕನ್ನಡಪುತ್ತೂರುಮಂಗಳೂರುಮೂಡಬಿದಿರೆಸುದ್ದಿಸುಳ್ಯಹಾಸನ

ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ -ಕಹಳೆ ನ್ಯೂಸ್

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ,ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತನ್ನ ಶಾಖೆಗಳಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ "ರಿಪಬ್ಲಿಕ್ ಸೇಲ್" ಜನವರಿ 22ರಿಂದ 26ರವರೆಗೆ ಆಯೋಜಿಸಲಾಗಿದ್ದು ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯು ಭಾರೀ ಏರಿಕೆ ಕಂಡಿದ್ದು ಜಿ ಎಲ್ ರಿಪಬ್ಲಿಕ್ ಸೇಲ್‌ನಿಂದಾಗಿ ಮೇಕಿಂಗ್ ಚಾರ್ಜಸ್‌ನ ಮೇಲೆ ವಿಶೇಷ ರಿಯಾಯಿತಿ ದರವು ಗ್ರಾಹಕರಿಗೆ ಹೆಚ್ಚಿನ ಲಾಭದಾಯಕವಾಗಿದೆ ಹಾಗೂ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರಕಿದೆ....
ಜಿಲ್ಲೆದಕ್ಷಿಣ ಕನ್ನಡಸಂತಾಪಸುದ್ದಿಸುಳ್ಯ

ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು – ಕಹಳೆ ನ್ಯೂಸ್

ಸುಳ್ಯ : ಸುಳ್ಯದ ಕುಲ್ಕುಂದದಲ್ಲಿ ಇಂದು ಮಧ್ಯಾಹ್ನ ಇಬ್ಬರು ಯುವಕರು ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ಸಂಭವಿಸಿದೆ.ಮೃತರನ್ನು ಸುಬ್ರಹ್ಮಣ್ಯ ಮೂಲದ ಉದ್ಯಮಿ ಹರಿಪ್ರಸಾದ್ ಕೊಲ್ಲಮೊಗರ ಮತ್ತು ಮತ್ತೊಬ್ಬ ಯುವಕ ಸುಜೀತ್ ಕೊಲ್ಲಮೊಗರ ಎಂದು ಗುರುತಿಸಲಾಗಿದೆ. ಸ್ಥಳೀಯ ಮೂಲಗಳ ಪ್ರಕಾರ, “ಇಬ್ಬರು ಈಜಲು ನದಿಗೆ ಹೋಗಿದ್ದಾಗ ಇದ್ದಕ್ಕಿದ್ದಂತೆ ನೀರಿನಲ್ಲಿ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ.”ಈ ಘಟನೆಗೆ ನಿಖರ ಕರಣ ಇನ್ನೂ ತಿಳಿದುಬಂದಿಲ್ಲ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾವಿನ...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಸಂತಾಪಸುದ್ದಿಸುಳ್ಯ

ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ-ಮಗು ಬೆಳಗಾಗುವಷ್ಟರಲ್ಲಿ ಕೆರೆಯಲ್ಲಿ ಶವವಾಗಿ ಪತ್ತೆ – ಕಹಳೆ ನ್ಯೂಸ್

ಸುಳ್ಯ : ರಾತ್ರಿ ಮನೆಯಲ್ಲಿ ನಿದ್ದೆಗೆ ಜಾರಿದ್ದ ತಾಯಿ ಹಾಗೂ ಮೂರು ವರ್ಷದ ಮಗು ಇಂದು ಬೆಳಗಾಗುವಷ್ಟರಲ್ಲಿ ಮನೆಯ ಬಳಿಯ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಕೋಡಿಯಾಲ ಗ್ರಾಮದ ಅರ್ವಾರ ಹರೀಶ್ ಎಂಬುವವರ ಪತ್ನಿ ಮಧುಶ್ರೀ (34) ಹಾಗು ಮದು ಧನ್ವಿ (3) ಮೃತರು. ಹರೀಶ್ ತನ್ನ ಪತ್ನಿ, ಮಗು ಹಾಗೂ ತಾಯಿ ಜೊತೆ ಅರ್ವಾರ ಮನೆಯಲ್ಲಿ ವಾಸವಾಗಿದ್ದರು. ರಾತ್ರಿ ಎಲ್ಲಾ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿಸುಳ್ಯ

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ : ನೂತನ ಜಿಲ್ಲಾಧ್ಯಕ್ಷರಾಗಿ ಈಶ್ವರ ವಾರಣಾಶಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜ್ಯೋತಿ ಪ್ರಕಾಶ್ ಪುಣಚ ಆಯ್ಕೆ-ಕಹಳೆನ್ಯೂಸ್

ಪುತ್ತೂರು: ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್‌ ಮಹಲ್‌ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ತಾರನಾಥ ಗಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಗೌರವಾಧ್ಯಕ್ಷರಾದ ಹರೀಶ್‌ ಬಂಟ್ವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾನುಟ್ ಜೆ ಪಿಂಟೊ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷರಾದ ರಾಮ್‌ದಾಸ್ ಶೆಟ್ಟಿ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌...
ಶಿಕ್ಷಣಸುದ್ದಿಸುಳ್ಯ

ಎನ್.ಎಂ.ಸಿ; ಬಿಬಿಎ ಫಾರಂ ವತಿಯಿಂದ ನವೋದ್ಯಮ ಕೌಶಲ್ಯ ತರಬೇತಿ ಕಾರ್ಯಾಗಾರ- ಕಹಳೆ ನ್ಯೂಸ್

ನವೆಂಬರ್ 17; ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ವ್ಯವಹಾರ ಅಧ್ಯಯನ ಆಡಳಿತ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಒಂದು ದಿನದ ನವೋದ್ಯಮ ಕೌಶಲ್ಯ ತರಬೇತಿ ಕಾರ್ಯಗಾರವನ್ನು ದಿನಾಂಕ 17.11.2025ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಜಗದೀಶ್ ರಾಮ ವ್ಯವಸ್ಥಾಪಕ ನಿರ್ದೇಶಕರು ಆಟೋಮೇಶನ್ ಕ್ಲವಡ್ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಮಂಗಳೂರು, ಇವರು ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ಮನೋಭಾವ ಬೆಳೆಸುವುದು ಮತ್ತು ಉದ್ಯಮಿ ಮನಸ್ಥಿತಿಯನ್ನು ಕರಗತ ಮಾಡಿಕೊಳ್ಳುವುದು ಎಂಬ ವಿಷಯದ ಮೇಲೆ ಎರಡು ಅವಿಧಿಗಳಲ್ಲಿ...
ಕ್ರೀಡೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಕೂಟ: ಎಸ್.ಡಿ.ಎಮ್ ಕಾಲೇಜು ಉಜಿರೆ: ಚಾಂಪಿಯನ್ ಆಳ್ವಾಸ್ ಕಾಲೇಜು ಮೂಡಬಿದಿರೆ: ರನ್ನರ್ ಅಪ್ -ಕಹಳೆ ನ್ಯೂಸ್

ಎನ್.ಎಂ.ಸಿ ; ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಕೂಟವು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಮತ್ತು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ನವೆಂಬರ್ 6 ಮತ್ತು 7 ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ ವಿ ಚಿದಾನಂದರವರು ಸಭಾಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ಪರ್ಧಿಗಳಿಗೆ ಶುಭ ಹಾರೈಸಿದರು....
ಜಿಲ್ಲೆಸುದ್ದಿಸುಳ್ಯ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳಗೊಂಡಿವೆ ; ಭಾಗೀರಥಿ ಮುರುಳ್ಯ-ಕಹಳೆ ನ್ಯೂಸ್

ಸುಳ್ಯ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳಗೊಂಡಿವೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆರೋಪಿಸಿದರು. ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 65ಕ್ಕಿಂತ ಹೆಚ್ಚು ಮಹಿಳೆಯರ ಹತ್ಯೆಯಾಗಿದೆ. 1,300ಕ್ಕಿಂತ ಹೆಚ್ಚು ಮಹಿಳಾ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಮೈಸೂರಿನಲ್ಲಿ ಸಣ್ಣ ಬಾಲಕಿ ಮೇಲೆ, ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್, ಕಾಲೇಜು ವಿದ್ಯಾರ್ಥಿನಿ ಮೇಲಿನ...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಜಾಲ್ಸೂರು: ಸುಳ್ಯ ವಲಯ ಮಟ್ಟದ ಕ್ರೀಡಾಕೂಟ 14 ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಜಾಲ್ಸೂರು ವಿನೋಭನಗರ ವಿವೇಕಾನಂದ ಶಾಲೆಯ ತಂಡ ಸಮಗ್ರ ದ್ವಿತೀಯ ಸ್ಥಾನ – ಕಹಳೆ ನ್ಯೂಸ್

ಜಾಲ್ಸೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಸ್ನೇಹ ವಿದ್ಯಾ ಸಂಸ್ಥೆ ಮತ್ತು ಗ್ರೀನ್ ವ್ಯೂ ವಿದ್ಯಾ ಸಂಸ್ಥೆ ಇದರ ವತಿಯಿಂದ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿಭಾಗ ಸುಳ್ಯ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಜಾಲ್ಸೂರು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, 10 ಚಿನ್ನದ ಪದಕ , 10 ಬೆಳ್ಳಿಯ ಪದಕ ಹಾಗು 8...
1 2 3 27
Page 1 of 27