ಎನ್ನೆಂಸಿ ನೇಚರ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ : ಯುವಜನರಲ್ಲಿ ಪ್ರಕೃತಿ ಪ್ರೇಮ ಮತ್ತು ಪರಿಸರ ಜಾಗೃತಿ ಅತ್ಯಗತ್ಯ: ಗೋಪಾಲಕೃಷ್ಣ ಬಿ ಕೆ – ಕಹಳೆ ನ್ಯೂಸ್*
ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ಇದರ 2026-27ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಜುಲೈ 31ನೇ ಶುಕ್ರವಾರದಂದು ಕಾಲೇಜಿನ ಕಿರು ಸಭಾಂಗಣದಲ್ಲಿ ನಡೆಯಿತು. ಮರದ ಕಾಂಡಕ್ಕೆ ಎಲೆಗಳನ್ನು ಬಿಡಿಸುವ ಭಿತ್ತಿಚಿತ್ರವನ್ನು ಅನಾವರಣಗೊಳಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ, ಮಾತನಾಡಿದ ಸುಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆರಂತೋಡು ಇಲ್ಲಿನ ಮುಖ್ಯ ಶಿಕ್ಷಕರಾದ ಗೋಪಾಲಕೃಷ್ಣ ಬನ ಇವರು ಇಂದಿನ ಪರಿಸರ ಸವಾಲುಗಳನ್ನು ಎದುರಿಸಲು ಯುವಜನರಲ್ಲಿ...







