ಫೆ.13ರಿಂದ ಫೆ.17ರದವರೆಗೆ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಧಾನ ಶ್ರೀ ಎಡನೀರು ಮಠ ಶ್ರೀ ವಿಷ್ಣುಮಂಗಲ ದೇವಾಲಯದ ವಾರ್ಷಿಕೋತ್ಸವ – ಕಹಳೆ ನ್ಯೂಸ್
ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಧಾನ ಶ್ರೀ ಎಡನೀರು ಮಠದಲ್ಲಿ ಶ್ರೀ ವಿಷ್ಣುಮಂಗಲ ದೇವಾಲಯದ ವಾರ್ಷಿಕೋತ್ಸವ 13-2-2023ನೇ ಸೋಮವಾರದಿಂದ 17-2-2023ನೇ ಶುಕ್ರವಾರದವರೆಗೆ ನಡೆಯಲಿದೆ.ಶ್ರೀಮದೆಡನೀರು ಮಠಾದೀಶರಾದ ಶ್ರೀ ಶ್ರೀ ಸಚ್ಚಿದಾನಂದ ಶ್ರೀಪಾದಂಗಳವರ ನೇತೃತ್ವ ಮತ್ತು ಅನುಗ್ರಹದೊಂದಿಗೆ ಹಾಗೂ ಶ್ರೀ ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ತಾಂತ್ರಿಕತ್ವ ಮತ್ತು ಮಾರ್ಗದರ್ಶನದಲ್ಲಿ 5 ದಿನಗಳ ಕಾಲ ಶ್ರೀಕ್ಷೇತ್ರದಲ್ಲಿ ವಾರ್ಷಿಕೋತ್ಸವ ನಡೆಯಲಿದೆ. ಫೆಬ್ರವರಿ 13ರಂದು ಬೆಳಗ್ಗೆ ಧ್ವಜಾರೋಹಣ, ಶ್ರೀಭೂತಬಲಿ, ಹಸಿರುವಾಣಿ ಮೆರವಣಿಗೆ, ಉಗ್ರಾಣ ಮೂಹೂರ್ತ,...







