ಕಲ್ಯಾ – ದಂಡತೀರ್ಥ ವಾರ್ಡಿಗೆ ಪುರಸಭಾ ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್
ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಕಲ್ಯಾ ಹಾಗೂ ದಂಡತೀರ್ಥ ವಾರ್ಡಿನ ರಸ್ತೆ ಬದಿಯಲ್ಲಿನ ಮನೆಗಳಿಗೆ ಮಳೆ ನೀರು ನುಗ್ಗುತ್ತಿರುವ ಬಗ್ಗೆ ಸ್ಥಳೀಯರು ಶಾಸಕರ ಗಮನಕ್ಕೆ ತಂದಿದ್ದು ಸ್ಥಳೀಯ ಮನವಿಯಂತೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಪುರಸಭಾ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚರಂಡಿಗಳ ಸಮರ್ಪಕ ನಿರ್ವಹಣೆ ಮಾಡದೇ ಇರುವುದರಿಂದ ಮಳೆ ನೀರು ರಸ್ತೆಯ ಮೂಲಕ ಹರಿದು ಮನೆಗಳಿಗೆ ನುಗ್ಗುತ್ತಿದ್ದು ಚರಂಡಿಗಳ ಹೂಳೆತ್ತಿ...





