ಮಂಗಳೂರು ಮಹಿಳೆಯರ ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಸಿ ಹಣ ವಸೂಲಿ ; ಯುವತಿಯರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದವ ಸೆರೆ.!! – ಕಹಳೆ ನ್ಯೂಸ್
ಮಂಗಳೂರು : ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಕಾರ್ಕಳದ ಈದು ಗ್ರಾಮದ ಸತೀಶ್ ಹೊಸಮಾರು (36) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಯುವತಿಯರ ಮೊಬೈಲ್ ನಂಬರನ್ನು ಇನ್ಸ್ಟಾಗ್ರಾಂ, ಫೇಸ್ಬುಕ್ ಐಡಿ ಮೂಲಕ ಪಡೆದು ಅವರಿಗೆ ನಿಮ್ಮ ಅಶ್ಲೀಲ ವಿಡಿಯೋ ನನ್ನಲ್ಲಿ ಇರುವುದಾಗಿ ಬೆದರಿಕೆ ಹೇಳಿ ಹಣಕ್ಕಾಗಿ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಹಣ ಕೊಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ...







