ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ ನಿಧನ – ಕಹಳೆ ನ್ಯೂಸ್
ಮಂಗಳೂರು : ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ಮಂಗಳೂರಿನಲ್ಲಿ ನೆಲೆಸಿದ್ದರು. ತಮ್ಮ ಹದಿನೇಳರ ಹರೆಯದಲ್ಲಿ ಶಿಕ್ಷಕರಾಗಿ ಕೆಲಸಕ್ಕೆ ಸೇರಿದ ಇವರು ಇಂಥಿಯೋಪಿಯಾದಲ್ಲಿ ಒಂಬತ್ತು ವರ್ಷ ಸೇರಿದಂತೆ ಒಟ್ಟು 25 ವರ್ಷ ಇಂಗ್ಲಿಷ್ ಪ್ರಾಧ್ಯಾಪಕರಾಗಿ ದುಡಿದಿದ್ದರು. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ್ದ ಕೆ.ಟಿ.ಗಟ್ಟಿ ಅವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ...

