Sunday, June 14, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರಾಕೃತಿಕ ವಿಕೋಪ ಪರಿಸ್ಥಿತಿ ಎದುರಿಸಲು ಸಿದ್ಧತೆ: ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್‌.ವಿ. – ಕಹಳೆ ನ್ಯೂಸ್

ಮಂಗಳೂರು : ಮುಂಗಾರು ಈಗಾಗಲೇ ಕೇರಳಕ್ಕೆ ಪ್ರವೇಶಿಸಿದ್ದು ಜೂ. 4ರಿಂದ ಕರಾವಳಿಗೂ ಪ್ರವೇಶ ವಾಗುವ ಸಾಧ್ಯತೆ ಇರುವುದರಿಂದ ಕೃತಕ ನೆರೆ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪದ ಪರಿಸ್ಥಿತಿಗಳನ್ನು ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು. ಪಡೀಲ್‌ನ ಪ್ರಜಾಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ದ.ಕ. ಜಿಲ್ಲೆಯಲ್ಲಿ ಒಟ್ಟು 115 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ತಹಶೀಲ್ದಾರ್ ಹಂತದಲ್ಲಿ ವಿವಿಧ ತಾಲೂಕುಗಳಲ್ಲಿ ತುರ್ತು ಪರಿಹಾರ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ರಾತ್ರಿ ಬೀಟ್ ಕರ್ತವ್ಯದ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ -ಕಹಳೆ ನ್ಯೂಸ್

ಮಂಗಳೂರು : ಇತ್ತೀಚೆಗೆ ನಗರದ ಕೋಡಿಕಲ್ ಬಳಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ ಸಚಿನ್ ಕೆ ಆರ್ (24 ವ) ಮತ್ತು ನೆಲ್ಯಾಡಿಯ ಚಂದನ್ (24 ವ) ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಉಪಯೋಗಿಸಿರುವ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಮೇ 24 ರಂದು ಮಧ್ಯರಾತ್ರಿ 02:10 ಗಂಟೆಯ ವೇಳೆಗೆ ಉರ್ವ ಪೊಲೀಸ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮೇ 24 ರಂದು ಮುಲ್ಕಿಯಲ್ಲಿ ಕೋಸ್ಟಲ್ ಫಿಲಂ ಅವಾರ್ಡ್ಸ್ 2026 – ಕಹಳೆ ನ್ಯೂಸ್

ಮಂಗಳೂರು: ಸತತ 5ನೇ ಬಾರಿಗೆ ಸ್ಯಾಂಡಿಸ್ ಕಂಪನಿ ಅರ್ಪಿಸುವ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಡ್ ಆವಾಡ್ಸ್ 9 2026 ಮೇ 24 ರಂದು ಭಾನುವಾರ ಸಂಜೆ 3:00ಗೆ ಮುಲ್ಕಿಯ ಸುಂದರರಾಮ ಶೆಟ್ಟಿ ಕನ್ವೆನನಲ್ ಸೆಂಟರ್ ಕೋಲ್ನಾಡ್ ಇಲ್ಲಿ ಸಂದೇಶ ರಾಜ್ ಬಂಗೇರ ಇವರ ಸಾರಥ್ಯದಲ್ಲಿ ಆದ್ದೂರಿಯಾಗಿ ನಡೆಯಲಿದೆ. ತಾರೆಯರಾದ ಸೋನಾಲ್ ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಖ್ಯಾತ ನಿದೇಶಕ ಸುಧೀರ್, ಮೊಂತೆರೋ, ನಿರ್ಮಾಪಕಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು:- ಶಾಸಕ ವೇದವ್ಯಾಸ್ ಕಾಮತ್ -ಕಹಳೆ ನ್ಯೂಸ್

ಮಂಗಳೂರು :ಕರಾವಳಿ ಭಾಗದ ಜನರಿಗೆ ಶೀಘ್ರಗತಿಯಲ್ಲಿ ನ್ಯಾಯದಾನ ಒದಗಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂಬ ಮಂಗಳೂರು ವಕೀಲರ ಸಂಘದ ಹಲವು ವರ್ಷಗಳ ಬೇಡಿಕೆಯು ಎಲ್ಲಾ ರೀತಿಯಿಂದಲೂ ನ್ಯಾಯಯುತವಾಗಿದೆ. ಅಂತೆಯೇ ಇಡೀ ಮಂಗಳೂರಿನ ಜನತೆಯ ಪರವಾಗಿ ನನ್ನ ಆಗ್ರಹವೂ ಅದೇ ಆಗಿದ್ದು, ಅದರಲ್ಲಿ ಯಾವುದೇ ರಾಜಿಯಿಲ್ಲ. ಆರಂಭದಿಂದಲೂ ರಾಜಕೀಯ ರಹಿತವಾಗಿ ನಡೆದುಕೊಂಡು ಬಂದ ಈ ಹೋರಾಟದ ಪ್ರತೀ ಹೆಜ್ಜೆಯಲ್ಲೂ ವಕೀಲರ ಸಂಘದ ಜೊತೆ ನಿಂತು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಧರೆ ಕುಸಿದು ಮಣ್ಣಿನಡಿ ಸಿಲುಕಿದ ವ್ಯಕ್ತಿ ನಿಧನ -ಕಹಳೆ ನ್ಯೂಸ್

ಮಂಗಳೂರು : ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಗುರುವಾರ (ಮೇ 21) ನಡೆದಿದೆ. ಉರ್ವ ಅಶೋಕನಗರ ನಿವಾಸಿ ಆಂಟನಿ ಮಸ್ಕರೇನ್ಹಸ್ (65) ಮೃತರು. ಸ್ಥಳಕ್ಕೆ ಧಾವಿಸಿದ ಕದ್ರಿ ಅಗ್ನಿಶಾಮಕ ಠಾಣೆ ಸಿಬಂದಿ ಕಾರ್ಯಾಚರಣೆ ನಡೆಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರಾದರೂ ಅವರನ್ನು ಉಳಿಸಲಾಗಲಿಲ್ಲ. ಗುರುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮನೆಯೊಂದರ ಹಿಂಭಾಗದಲ್ಲಿ ಅವರಣ ಗೋಡೆ ನಿರ್ಮಾಣಕ್ಕೆ ಅಳತೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಈಜಲು ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವು -ಕಹಳೆ ನ್ಯೂಸ್

ಮಂಗಳೂರು: ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಪಜಿರಡ್ಕದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಉಜಿರೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇವರು ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದರು. ಏಳು ಜನ ಸ್ನೇಹಿತರ ತಂಡ ನೇತ್ರಾವತಿ ನದಿಗೆ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಈಜಾಡಲು ತೆರಳಿತ್ತು. ಈ ವೇಳೆ ಯುವಕ ನೀರಿನಲ್ಲಿ ಮುಳುಗಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – ಕಹಳೆ ನ್ಯೂಸ್

ಮಂಗಳೂರು : ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 7 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಹಾವೇರಿಯಲ್ಲಿ 5, ಮೂಡಬಿದ್ರೆ, ಶಿವಮೊಗ್ಗ, ಹುಂಚದಕಟ್ಟೆ, ಕೊಟ್ಟಿಗೆಹಾರದಲ್ಲಿ ತಲಾ 4, ಉಪ್ಪಿನಂಗಡಿ, ಪುತ್ತೂರು, ಸುಳ್ಯ,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ : ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು -ಕಹಳೆ ನ್ಯೂಸ್

ಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಬೆಳಲು ನಿವಾಸಿ ನೌಫಾಲ್ (28) ಸಾವನ್ನಪ್ಪಿದ್ದಾರೆ. ಇನ್‌ಸ್ಟಾ ಮಾರ್ಟ್‌ ಸಪ್ಲೈ ಪಾಯಿಂಟ್‌ನಲ್ಲಿ ದಿನಸಿ ವಸ್ತುಗಳನ್ನು ಲಿಫ್ಟ್‌ನಲ್ಲಿ ಸಾಗಿಸುತ್ತಿದ್ದರು. ಈ ವೇಳೆ ದುರ್ಘಟನೆಯಾಗಿದೆ. ವಸ್ತುಗಳನ್ನು ಸಾಗಿಸುತ್ತಿದ್ದ ವೇಳೆ ಏಕಾಏಕಿ ಲಿಫ್ಟ್ ಕುಸಿದಿದೆ. ಲಿಫ್ಟ್‌ನಲ್ಲಿ ಸಿಲುಕಿ ನೌಫಾಲ್ ಸಾವಿಗೀಡಾಗಿದ್ದಾರೆ. ದುರಂತದ ದೃಶ್ಯ ಸಿಸಿ ಕ್ಯಾಮರಾದಲ್ಲಿ‌ ಸೆರೆಯಾಗಿದೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ...
1 2 3 4 112
Page 2 of 112