ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್‌ಗೆ ಡಿಪಿಆರ್ ತಯಾರಿ ಕಾರ್ಯ ಆರಂಭ ; ದ.ಕ.ಕ್ಕೆ ಮೋದಿ ಸರ್ಕಾರದ ಮಹತ್ವದ ಮೂಲಸೌಕರ್ಯ ಯೋಜನೆ; ಸಂಯೋಜಿತ ಡಿಪಿಆರ್ ಗೆ ಸಲಹೆ: ಸಂಸದ ಕ್ಯಾ. ಚೌಟ -ಕಹಳೆ ನ್ಯೂಸ್
ಮಂಗಳೂರು: ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್ ಎಕ್ಸ್‌ಪ್ರೆಸ್ ಕಾರಿಡಾರ್ ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಹೆದ್ದಾರಿ ಸಚಿವಾಲಯದಿಂದ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರು-ಬೆಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆ ಬಗ್ಗೆ ಮಾಹಿತಿ ನೀಡಿರುವ ಕ್ಯಾ. ಚೌಟ, ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ವೇಗದ...







