6 ಕೋಟಿ ವೆಚ್ಚದಲ್ಲಿ ದಕ್ಷಿಣ ಕನ್ನಡದ ಎರಡು ಪ್ರಮುಖ ರಸ್ತೆ ಅಭಿವೃದ್ದಿಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್
ಮಂಗಳೂರು: ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್ಐಎಫ್)ಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಪ್ರಮುಖ ರಸ್ತೆಗಳನ್ನು ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಇಂದು ಗುದ್ದಲಿಪೂಜೆ ನೆರವೇರಿಸಲಾಯಿತು. ಸಿಆರ್ಐಎಫ್ ಅನುದಾನದಡಿ ಪುತ್ತೂರು ತಾಲೂಕಿನ ಪರ್ಲಡ್ಕ ಮಾರ್ಗವಾಗಿ ಹಾದು ಹೋಗುವ ಸುಬ್ರಹ್ಮಣ್ಯ-ಮಂಜೇಶ್ವರ ರಸ್ತೆಯನ್ನು ಸುಮಾರು 3.12 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 275ರಿಂದ ರಾಜ್ಯ ಹೆದ್ದಾರಿ 100ನ್ನು...







