ಮಂಗಳೂರು ಮುಂದುವರಿದ ಅಡುಗೆ ಅನಿಲದ ಕೊರತೆ; ಸಂಕಷ್ಟದಲ್ಲಿ ಹೋಟೆಲ್ ಉದ್ಯಮ -ಕಹಳೆ ನ್ಯೂಸ್
ಮಂಗಳೂರು : ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆಯ ಜೊತೆಗೆ, ಇದೀಗ ಅನಿಲ ಪೂರೈಕೆಯ ಕೊರತೆಯು ಹೋಟೆಲ್ ಉದ್ಯಮವನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ವಾಣಿಜ್ಯ ಅನಿಲದ ಪೂರೈಕೆಯು ಬೇಡಿಕೆಗೆ ತಕ್ಕಂತೆ ಇಲ್ಲದಿರುವುದರಿಂದ, ಹೋಟೆಲ್ ಮಾಲೀಕರು ಪರ್ಯಾಯ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಕೆಲವು ಹೋಟೆಲ್‌ಗಳು ಸಾಂಪ್ರದಾಯಿಕ ಕಟ್ಟಿಗೆ ಒಲೆಗಳ ಮೊರೆ ಹೋಗಿದ್ದರೆ, ಇನ್ನು ಕೆಲವರು ತಮ್ಮ ಮೆನುವಿನಲ್ಲಿ ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಕೆಲವು ಹೊಟೇಲ್‌ಗಳು ಪಾಳಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದು, ಬೆಳಿಗ್ಗೆ ಚಹಾ, ಕಾಫಿಯೊಂದಿಗೆ ಸೀಮಿತ...







