Friday, July 24, 2026

ಮಡಿಕೇರಿ

ಜಿಲ್ಲೆಮಡಿಕೇರಿಸುದ್ದಿ

ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ : ಗುಂಡು ಹಾರಿಸಿಕೊಂಡು ಕೊಡಗಿನ ಯುವಕ ಆತ್ಮಹತ್ಯೆ -ಕಹಳೆ ನ್ಯೂಸ್

ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ನಾಪೋಕ್ಲು ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ಬಳಿಕ ಕವನ್ ಮೃತದೇಹವನ್ನ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೇಲ್ನೋಟಕ್ಕೆ ಕವನ್‌ ಸ್ಟಾಕ್ ಮಾರ್ಕೇಟ್ ನಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ....
ಕೊಡಗುಜಿಲ್ಲೆಮಡಿಕೇರಿಸುದ್ದಿ

ಎಲ್‌ಇಡಿ ಬಲ್ಬ್‌ ನುಂಗಿದ ಎಂಟು ತಿಂಗಳ ಕಂದಮ್ಮ – ಕಹಳೆ ನ್ಯೂಸ್

ಮಡಿಕೇರಿ: ಎಂಟು ತಿಂಗಳ ಕಂದಮ್ಮ ಎಲ್‌ಇಡಿ ಬಲ್ಬ್  ನುಂಗಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ  ನಗರದಲ್ಲಿ ನಡೆದಿದೆ. ಮನೆಯಲ್ಲಿದ್ದ ವೇಳೆ ಮಗು ಏಕಾಏಕಿ ವಿಪರೀತವಾಗಿ ಅಳಲು ಶುರುಮಾಡಿದ್ದು, ಗಾಬರಿಗೊಂಡ ಪೋಷಕರು ಕಾರಣ ತಿಳಿಯದೇ ಕೂಡಲೇ ಮಡಿಕೇರಿ ನಗರದ ಆಸ್ಪತ್ರೆಗೆ ಕರೆತಂದಿದ್ದಾರೆ.  ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಬಳಿಕ ಎಕ್ಸ್‌ರೇ (X-ray) ತೆಗೆಸಿ ನೋಡಿದಾಗ ಮಗುವಿನ ಗಂಟಲು ಭಾಗದಲ್ಲಿ ಸಣ್ಣ ಲೋಹದ ವಸ್ತು ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದಾರೆ. ಆರಂಭದಲ್ಲಿ ಪಿನ್...
ಕೊಡಗುಜಿಲ್ಲೆಮಡಿಕೇರಿಸುದ್ದಿ

ಕೊಡಗಿನ ತಾಯಿ-ಮಗು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಮತಾಂತರ & ಲವ್ ಜಿಹಾದ್‌ಗೆ ದೊಡ್ಡ ಸಂಚು -ಕಹಳೆ ನ್ಯೂಸ್

ಮಡಿಕೇರಿ: ಒಂದೂವರೆ ತಿಂಗಳ ಹಿಂದೆ ಕೊಡಗಿನ  ಕುಶಾಲನಗರದಿಂದ ನಾಪತ್ತೆಯಾಗಿದ್ದ ಸಚಿತಾ ಹಾಗೂ ಆಕೆಯ 9 ವರ್ಷದ ಮಗು ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ಮದರಸವೊಂದರಲ್ಲಿ ಪತ್ತೆಯಾಗಿದ್ದಾರೆ. ಈ ಪ್ರಕರಣದ ಹಿಂದೆ ಮತಾಂತರ ಹಾಗೂ ಲವ್ ಜಿಹಾದ್‌ನ  ದೊಡ್ಡ ಸಂಚು ಇದೆ ಎಂದು ಕುಶಾಲನಗರದ ಹಿಂದೂಪರ ಸಂಘಟನೆಗಳು ಆರೋಪಿಸಿವೆ. ಮಲಪ್ಪುರಂ ಜಿಲ್ಲೆಯ ಪೊನ್ನಾಣಿ ಹಾಗೂ ಮಂಜೇರಿ ಭಾಗಗಳಲ್ಲಿ ಮತಾಂತರ ಜಾಲ ಕಾರ್ಯನಿರ್ವಹಿಸುತ್ತಿದೆ ಎಂಬ ಆರೋಪವನ್ನೂ ಮಾಡಿವೆ. ಕುಶಾಲನಗರ ಬಳಿಯ ಎನ್‌ಟಿಸಿ ಕಾಂಪ್ಲೆಕ್ಸ್‌ನ...
ಮಡಿಕೇರಿಸುದ್ದಿ

ಸಿನಿಮೀಯ ಶೈಲಿಯಲ್ಲಿ 40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು -ಕಹಳೆ ನ್ಯೂಸ್

ಮಡಿಕೇರಿ: ಸಿನಿಮೀಯ ಶೈಲಿಯಲ್ಲಿ 40 ಅಡಿ ಆಳದ ಕಂದಕಕ್ಕೆ ಕಾರು (Car) ಉರುಳಿ ಬಿದ್ದ ಘಟನೆ ಮಡಿಕೇರಿ-ಮೂರ್ನಾಡು ರಸ್ತೆಯಲ್ಲಿ ನಡೆದಿದೆ. ಆಲ್ವೇಸ್ ಸರ್ವಿಸ್ ಸ್ಟೇಷನ್ ಸಮೀಪ ಘಟನೆ ನಡೆದಿದ್ದು, ಮೂರ್ನಾಡು ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಿಂದ ವಾಹನಕ್ಕೆ ಭಾರೀ ಹಾನಿಯಾಗಿದೆ. ಕಾರಿನ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಮಡಿಕೇರಿ ನಗರದ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ...
ಕೊಡಗುಜಿಲ್ಲೆಮಡಿಕೇರಿಸುದ್ದಿ

ಕೊಡಗಿನಲ್ಲಿ ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಪತ್ನಿ ಸಾವು -ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷಕ್ಕೆ ಮೀತಿಯೇ ಇಲ್ಲದಂತಾಗಿದೆ. ಇಂದು ಬೆಳಗ್ಗೆ ಕೂಡ ಕಾಡಾನೆ ತುಳಿತಕ್ಕೆ  ನಿವೃತ್ತ ಐಜಿಪಿ ಪತ್ನಿ ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯತಿ ಸಮೀಪದ ಕೊಣ್ಣನಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (58) ಸಾವಿಗೀಡಾಗಿದ್ದಾರೆ. ಸಂಧ್ಯಾ ಅವರು ಇಂದು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದರು. ಹಾಗೇ ತೋಟದ ಕಾರ್ಮಿಕರು...
ಜಿಲ್ಲೆಮಡಿಕೇರಿಸುದ್ದಿ

ಕೊಡಗಿನ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ: ಯದುವೀರ್ ಸ್ಪಷ್ಟನೆ -ಕಹಳೆ ನ್ಯೂಸ್

ಮಡಿಕೇರಿ: ಕೊಡಗು  ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಂಸದ ಯದುವೀರ್ ಒಡೆಯರ್  ಸ್ಪಷ್ಟಪಡಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಬಳಿಕ ಈ ಕುರಿತು ಯದುವೀರ್ ಸ್ಪಷ್ಟನೆ ನೀಡಿದ್ದಾರೆ. ಭೇಟಿ ಸಂದರ್ಭದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಿದ್ದಾರೆ. ಇತ್ತೀಚಿನ...
ಕೊಡಗುಜಿಲ್ಲೆಮಡಿಕೇರಿಸುದ್ದಿ

ದುಬಾರೆ ದುರಂತ : ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ಕೇಸ್ -ಕಹಳೆ ನ್ಯೂಸ್

ಮಡಿಕೇರಿ: ದುಬಾರೆ ಆನೆ ಕ್ಯಾಂಪ್‌ನಲ್ಲಿ  ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ  ವಿರುದ್ಧ ಉಪ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಎ ಹಾಗೂ ಕುಶಾಲನಗರ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ರಕ್ಷಿತ್ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಪ್ರಕರಣ ದಾಖಲಿಸಿದ್ದಾರೆ. ಮೇ 18ರಂದು ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ...
ಜಿಲ್ಲೆಮಡಿಕೇರಿಸುದ್ದಿ

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ : ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40) (Actor Harish) ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ನಿನ್ನೆ ಕೆಲಸ ಮುಗಿಸಿಕೊಂಡು ತಡರಾತ್ರಿ ಹರೀಶ್ ಅವರು ಕುಶಾಲನಗರದಿಂದ ತಮ್ಮ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು....
1 2 3 11
Page 1 of 11