ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅಂತ್ಯಕ್ರಿಯೆ : ಅಂತಿಮ ದರ್ಶನಕ್ಕೆ ಜನಸ್ತೋಮ -ಕಹಳೆ ನ್ಯೂಸ್
ಮುಂಬೈ: ಪುಣೆಯ ಬಾರಾಮತಿಯಲ್ಲಿ ಸಂಭವಿಸಿದ ದುರಂತ ವಿಮಾನ ಅಪಘಾತದಲ್ಲಿ ನಿಧನರಾದ ಡಿಸಿಎಂ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಮಹಾರಾಷ್ಟ್ರ ತನ್ನ ಪ್ರೀತಿಯ ‘ದಾದಾ’ನಿಗೆ ಬೆಳಗ್ಗೆ 11 ಗಂಟೆಗೆ ವಿದಾಯ ಹೇಳಲಿದೆ. ಡಿಸಿಎಂ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯನ್ನು ಅವರ ರಾಜಕೀಯ ಭದ್ರಕೋಟೆಯಾದ ಬಾರಾಮತಿಯಲ್ಲಿ ನೆರವೇರಿಸಲಾಗುವುದು. ಅಂತ್ಯಕ್ರಿಯೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಭಾಗವಹಿಸಲಿದ್ದಾರೆ. ಎನ್‌ಸಿಪಿ...







