Friday, July 24, 2026

ಸಂತಾಪ

ಬೆಂಗಳೂರುರಾಜ್ಯಸಂತಾಪಸುದ್ದಿ

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ – ಕಹಳೆ ನ್ಯೂಸ್

ಬೆಂಗಳೂರು : ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ  ಅವರ ತಾಯಿ ಜಯಮ್ಮ (70)  ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಇಂದು (ಜೂನ್ 16) ಬೆಳಗ್ಗೆ ಎಂಬೆಸ್ಸಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಫಿಲ್ಮ್ ಚೇಂಬರ್‌ನ ಮಾಜಿ ಅಧ್ಯಕ್ಷ ಹಾಗೂ ನಿರ್ಮಾಪಕ ಚಿನ್ನೇಗೌಡ ಅವರ ಪತ್ನಿ ಜಯಮ್ಮ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಹೃದಯಾಘಾತದಿಂದ (Heart...
ಮುಂಬೈಸಂತಾಪಸುದ್ದಿ

‘ಕುಂಕುಮ ಭಾಗ್ಯ’ ನಟಿ ಸಂಚಿತಾ ಉಗಲೆ ನೇಣಿಗೆ ಶರಣು -ಕಹಳೆ ನ್ಯೂಸ್

ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ಸಂಜೆ ಸುಮಾರು 5:30ರ ವೇಳೆಗೆ ಸಂಚಿತಾ ಅವರ ಸಹೋದರಿ ಅಂಜಲಿ ಮನೆಯಿಂದ ಹೊರಗೆ ಹೋಗಿದ್ದರು. ಈ ಸಮಯದಲ್ಲಿ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ನಟಿ ಸಂಚಿತಾ ಅವರು ತಮ್ಮ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ತುಲಿಂಜ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.  ಆತ್ಮಹತ್ಯೆಗೆ ನಿಖರ ಕಾರಣವೇನೆಂದು...
ಉಡುಪಿಜಿಲ್ಲೆಸಂತಾಪಸುದ್ದಿ

ತಾಯಿ ಮಡಿಲಲ್ಲಿದ್ದ ಕಂದಮ್ಮನ ಮೇಲೆ ಬಿದ್ದ ತೆಂಗಿನಕಾಯಿ : ಮಗು ದುರಂತ ಸಾವು – ಕಹಳೆ ನ್ಯೂಸ್

ಉಡುಪಿ: ತಾಯಿಯ ಮಡಿಲಲ್ಲಿದ್ದ ಕಂದಮ್ಮನ ಮೇಲೆ ತೆಂಗಿನಕಾಯಿ ಬಿದ್ದು, ಮಗು ದುರಂತ ಸಾವು ಕಂಡಿರುವ ಘಟನೆ ಉಡುಪಿಯಲ್ಲಿ (Udupi) ನಡೆದಿದೆ. ಒಂದೂವರೆ ವರ್ಷದ ದಕ್ಷ ಮೃತ ಮಗು. ಬ್ರಹ್ಮಾವರ ತಾಲೂಕು ಚಾಂತಾರು ಹೆರಂಜಾಲು ಗ್ರಾಮದಲ್ಲಿ ಘಟನೆ ನಡೆದಿದೆ. ಕಂದಮ್ಮನ ಅಕಾಲಿಕ ಮರಣಕ್ಕೆ ಗ್ರಾಮ ಕಂಬನಿ ಮಿಡಿದಿದೆ. ಪ್ರಶಾಂತ್ ಮತ್ತು ಸುಚಿತ್ರಾ ದಂಪತಿ ಎರಡನೇ ಪುತ್ರ ದಕ್ಷ. ಮಗುವನ್ನು ಮಡಿಲಲ್ಲಿ ಮಲಗಿಸಿಕೊಂಡು ತಾಯಿ ತೆಂಗಿನಮರದ ಕೆಳಗೆ ಕುಳಿತಿದ್ದರು. ಈ ವೇಳೆ, ಅಚಾನಕ್ ಆಗಿ...
ಸಂತಾಪಸುದ್ದಿ

ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸಹೋದರ ಪ್ರತೀಕ್‌ ಯಾದವ್‌ ನಿಧನ -ಕಹಳೆ ನ್ಯೂಸ್

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ದಿವಂಗತ ಮುಲಾಯಂ ಸಿಂಗ್ ಯಾದವ್  ಅವರ ಕಿರಿಯ ಪುತ್ರ ಹಾಗೂ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಸಹೋದರ ಪ್ರತೀಕ್ ಯಾದವ್ (38 ವರ್ಷ) ಅವರು ಲಕ್ನೋದಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಬೆಳಿಗ್ಗೆ ಸುಮಾರು 6 ಗಂಟೆಗೆ ಪ್ರತೀಕ್ ಯಾದವ್ಅ ವರನ್ನು ಲಕ್ನೋದ ಸಿವಿಲ್ ಆಸ್ಪತ್ರೆಗೆ ಕರೆತರಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಮೃತಪಟ್ಟಿದ್ದಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.  ಇವರು...
ಜಿಲ್ಲೆಬೆಳಗಾವಿಸಂತಾಪಸುದ್ದಿ

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್ -ಕಹಳೆ ನ್ಯೂಸ್

ಬೆಳಗಾವಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜ್ಯೋತಿ ನಗರದಲ್ಲಿ ನಡೆದಿದೆ. ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಗಂಡ, ಹೆಂಡತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತು ಮನೆಯ ಮೊದಲ ಮಹಡಿಯಲ್ಲಿ ಕಿಟಿಕಿ ಗ್ರಿಲ್‌ಗೆ ವೇಲ್ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾರೆ. ತವರು ಮನೆಯವರೊಂದಿಗೆ ಮಾತನಾಡಬಾರದೆಂದು...
ಚಿಕ್ಕಮಂಗಳೂರುಜಿಲ್ಲೆಸಂತಾಪಸುದ್ದಿ

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿ : 8 ಮಂದಿಗೆ ಗಾಯ -ಕಹಳೆ ನ್ಯೂಸ್

ಚಿಕ್ಕಮಗಳೂರು: ಕುಕ್ಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಪಘಾತದಲ್ಲಿ ಎಂಟು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಮಾಡಲಾಗುತ್ತಿದೆ. ಬಸ್‍ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಯುವ ಛಾಯಾಗ್ರಾಹಕ ಸಾ*ವು – ಕಹಳೆ ನ್ಯೂಸ್

ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ನಿನ್ನೆ (ಮಾ.14) ರಾತ್ರಿ ವಾಣೆಮಂಗಳೂರು ಎಂಬಲ್ಲಿ ಎರಡು ಬೈಕ್‌ ಗಳ ನಡುವೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ರಕ್ಷಿತ್ ಅವರನ್ನ ಮಂಗಳೂರು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅದರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಬಗ್ಗೆ ಪೋಲೀಸ್ ಇಲಾಖೆ ಮಾಹಿತಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಗುಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಮೂವರು ದುರ್ಮರಣ -ಕಹಳೆ ನ್ಯೂಸ್

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಶುಕ್ರವಾರ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮದುವೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಯಮರೂಪಿಯಾಗಿ ಬಂದ ಬಸ್ ಇವರ ಬದುಕನ್ನು ಬಲಿಪಡೆದಿದೆ. ಅಪಘಾತದಲ್ಲಿ ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ, ಉಜಿರೆ ನಿವಾಸಿಗಳಾದ ಶ್ರೀಧರ್ ಮತ್ತು ಜನಾರ್ದನ ಕೆರಿಮಾರ್ ಮೃತಪಟ್ಟಿದ್ದಾರೆ. ಇಬ್ಬರು ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ...
1 2 3 37
Page 1 of 37