Thursday, March 12, 2026

ಸಂತಾಪ

ಬೆಂಗಳೂರುಸಂತಾಪಸುದ್ದಿ

ಬಿಜೆಪಿ ಸರ್ಕಾರದ ವಿರುದ್ಧ 40 % ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ‘ಕೆಂಪಣ್ಣ’ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಂಗಳೂರು : ಹೃದಯಾಘಾತದಿಂದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ(84) ನಿಧನರಾಗಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಕೆಂಪಣ್ಣ ಅವರು ಬಿಜೆಪಿ ಸರ್ಕಾರದ ವಿರುದ್ಧ 40 % ಕಮಿಷನ್ ಆರೋಪ ಮಾಡಿ ಬಹಳ ಸುದ್ದಿಯಾಗಿದ್ದರು. ಕೆಂಪಣ್ಣ ಅವರು ಬೊಮ್ಮಾಯಿ ಸರ್ಕಾರದ ವಿರುದ್ಧ 40 % ಕಮಿಷನ್ ಆರೋಪ ಮಾಡಿದ ಬಳಿಕ 40 % ಕಮಿಷನ್ ಆರೋಪ ರಾಜ್ಯದಲ್ಲಿ...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

 ಖ್ಯಾತ ಸಾಹಿತಿ, ಕಥೆಗಾರ್ತಿ, ಆಕಾಶವಾಣಿ ಕಲಾವಿದೆ ಮನೋರಮಾ ಎಂ.ಭಟ್ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು: ಖ್ಯಾತ ಸಾಹಿತಿ, ಕಥೆಗಾರ್ತಿ, ಆಕಾಶವಾಣಿ ಕಲಾವಿದೆ ಹಾಗೂ ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ ಮಹಾಬಲ ಭಟ್ ಅವರ ಪತ್ನಿ ಮನೋರಮಾ ಎಂ.ಭಟ್(92) ವಯೋಸಹಜ ಕಾರಣದಿಂದ ಸೆ.15ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇಬ್ಬರು ಪುತ್ರರು, ಅಪಾರ ಬಂಧು, ಬಾಂಧವರನ್ನು ಅಗಲಿದ್ದಾರೆ. ಅವರ ಕಿರಿಯ ಸೊಸೆ ಖ್ಯಾತ ಒಡಿಸ್ಸಿ ನೃತ್ಯಗಾತಿ ಬಿಜೋಯಿನಿ ಸತ್ಪತಿ ಹೋರಾಟಗಾರ್ತಿ ಸಾಹಿತಿಯಾಗಿದ್ದ ಮನೋರಮಾ ಭಟ್ ಅವರು ಸಣ್ಣಕತೆಗಾರ್ಥಿಯಾಗಿ ಸಾಹಿತ್ಯಕ್ಷೇತ್ರ ಪ್ರವೇಶಿಸಿದವರು. ಸ್ವಯಂವರ(ಸಣ್ಣಕಥಾ ಸಂಕಲನ),...
ದಕ್ಷಿಣ ಕನ್ನಡಮಂಗಳೂರುಸಂತಾಪಸಿನಿಮಾಸುದ್ದಿ

ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್ ಖ್ಯಾತಿಯ ರಂಗನಟ, ಖ್ಯಾತ ಕಲಾವಿದ ಅಶೋಕ್ ಶೆಟ್ಟಿ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು : ಖ್ಯಾತ ಕಲಾವಿದ, ತುಳು ನಾಟಕ ರಂಗದ ಬರಹಗಾರ, ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್‌ನಲ್ಲಿ ತೆಂಗಿನಕಾಯಿ ಕೀಳುವ ನಾಥು ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಅಶೋಕ್ ಶೆಟ್ಟಿ ಅಂಬ್ಲಿಮೊಗರು(53) ಸೋಮವಾರ ನಿಧನರಾದರು.   ಅಶೋಕ್ ಸೋಮವಾರ ಬೆಳಗ್ಗೆ ಅಂಬ್ಲಿಮೊಗರುವಿನ ತಮ್ಮ ಮನೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ವೃತ್ತಿಪರ ರಂಗಭೂಮಿಯ ನಟ ಮತ್ತು ಬರಹಗಾರ ಅಶೋಕ್ ಹಲವು ದಶಕಗಳ ಕಾಲ ವಿಜಯ ಕುಮಾರ್...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಹೃದಯಾಘಾತದಿಂದ ಭಾಸ್ಕರ್ ಆಚಾರ್ಯ ನಿಧನ – ಕಹಳೆ ನ್ಯೂಸ್

ಪುತ್ತೂರು : ಸಂಟ್ಯಾರ್ ನಿವಾಸಿ ಭಾಸ್ಕರ್ ಆಚಾರ್ಯ (61ವ) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಮಕ್ಕಳು, ಅಳಿಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.  ...
ಉಡುಪಿಸಂತಾಪಸುದ್ದಿ

ದೂರದರ್ಶನ ವರದಿಗಾರ ಜಯಕರ ಸುವರ್ಣ ಇನ್ನಿಲ್ಲ..- ಕಹಳೆ ನ್ಯೂಸ್

ಉಡುಪಿ : ದೂರದರ್ಶನ ವರದಿಗಾರ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ‌ ಅಧ್ಯಕ್ಷ, ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67 ವರ್ಷ) ಸೋಮವಾರ ರಾತ್ರಿ ಹೃದಯಾಘಾತದಿಂದ ಇಲ್ಲಿನ ಖಾಸಗಿ‌ ಆಸ್ಪತ್ರೆಯಲ್ಲಿ ನಿಧನರಾದರು. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಫೊಟೊಗ್ರಾಫರ್ಸ್ ಅಸೋಸಿಯೇಶನ್, ಬಿಲ್ಲವ ಸಂಘ ಮೊದಲಾದ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಮತ್ತು ಈವರ್ವರು ಪುತ್ರಿಯರನ್ನು ಅಗಲಿದ್ದಾರೆ. ಜಯಕರ...
ಉಡುಪಿಸಂತಾಪಸುದ್ದಿ

ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ! – ಕಹಳೆ ನ್ಯೂಸ್

ಮಣಿಪಾಲ: ವಾರದ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ 'ಲಕ್ಕಿ'ಯ ಅಗಲುವಿಕೆಯಿಂದ ಬೇಸರಗೊಂಡಿದ್ದ ಕಂಬಳಾಭಿಮಾನಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಇತ್ತೀಚಿನ ದಿನಗಳಲ್ಲಿ ಉಭಯ ಜಿಲ್ಲೆಯ ಕೂಟಗಳಲ್ಲಿ ಹೆಸರು ಮಾಡಿದ್ದ 'ನಾಗು' ಎಂಬ ಕೋಣ ಶನಿವಾರ ಅಸುನೀಗಿದೆ.   ಜಪ್ಪು ಮಂಕು ತೋಟ ಅನಿಲ್ ಶೆಟ್ಟಿಯವರ ಯಜಮಾನಿಕೆಯಲ್ಲಿ ನಾಗು ಎಂಬ ಶನಿವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದೆ. ನಾಲ್ಕು ವರ್ಷಗಳ ಹಿಂದೆ ಹಲಗೆ ಸೀನಿಯರ್ ವಿಭಾಗಕ್ಕೆ ಎಂಟ್ರಿ ನೀಡಿದ್ದ ನಾಗು ಹಲವು ಕಂಬಳಗಳಲ್ಲಿ ಭಾಗವಹಿಸಿ...
ಕುಂದಾಪುರಸಂತಾಪಸುದ್ದಿ

ಅಂತರಾಷ್ಟ್ರೀಯ ಸಂಗೀತ ಕಾರ್ಯಕ್ರಮಗಳ‌ ಸಂಯೋಜಕರು,ಪ್ರಖ್ಯಾತ ವೈದ್ಯರು,ಮಾತಾ ಆಸ್ಪತ್ರೆ ಕುಂದಾಪುರ ಮತ್ತು ಪರಿವರ್ತನಾ ಫೌಂಡೇಶನ್ ಕೋಟ ಇದರ ಪ್ರವರ್ತಕ ಡಾ.ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ–ಕಹಳೆ ನ್ಯೂಸ್

ಕುಂದಾಪುರ: ಖ್ಯಾತ ವೈದ್ಯರು, ಕುಂದಾಪುರ ಮಾತಾ ಆಸ್ಪತ್ರೆ ಮತ್ತು ಪರಿವರ್ತನಾ ಫೌಂಡೇಶನ್ ಕೋಟ ಇದರ ಪ್ರವರ್ತಕರಾದ ಡಾ.ಸತೀಶ್ ಪೂಜಾರಿ (54) ಇವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಮನಸ್ಮಿತ ಫೌಂಡೇಶನ್ ಮೂಲಕ ಉತ್ತಮ ಕಾರ್ಯಕ್ರಮ ಸಂಯೋಜಕರಾಗಿ ವೈದ್ಯ ವೃತ್ತಿ ಜೊತೆಗೆ ಹಾಡುಗಾರರಾಗಿದ್ದ ಅವರು ಅಂತರಾಷ್ಟ್ರೀಯ ಸಂಗೀತ ಕಾರ್ಯಕ್ರಮಗಳ‌ ಸಂಯೋಜಕರಾಗಿದ್ದರು. ಮೃತರು ಪತ್ನಿ ಮತ್ತು ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಗಾಯಕಿಯರಾದ ಎಸ್....
ದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಸಂತಾಪಸುದ್ದಿ

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ – ಕಹಳೆ ನ್ಯೂಸ್

ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತಕ್ಕೀಡಾಗಿ ಜುಲೈ 5ರಂದು ನಿಧನರಾಗಿದ್ದಾರೆ. 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕುಂಬ್ಳೆ ಶ್ರೀಧರ ರಾವ್ ಪರಿಚಯ: 1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್‌ರವರು 34...
1 18 19 20 21 22 36
Page 20 of 36