ಅಂಬಿಕಾ ಮಹಾವಿದ್ಯಾಲಯದಲ್ಲಿ ನಟ್ಟೋಜ ಶಿವಾನಂದ ರಾವ್ ಅವರಿಗೆ ನುಡಿನಮನ – ಕಹಳೆ ನ್ಯೂಸ್
ಪುತ್ತೂರು : ನಟ್ಟೋಜ ಶಿವಾನಂದ ರಾವ್ ಅವರು ಸಾಮಾಜಿಕ ಹಾಗೂ ರಾಜಕೀಯವಾಗಿ ಸಕ್ರೀಯರಾಗಿದ್ದು, ಪ್ರಗತಿಪರ ಕೃಷಿಕರಾಗಿ ಹೆಸರು ಗಳಿಸಿದ್ದರು. ಧರ್ಮ, ದೇಶ, ದೇವರಿಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದರು. ದೇಶದ ಭಾವಿ ಪ್ರಜೆಗಳಾದ ಇಂದಿನ ವಿದ್ಯಾರ್ಥಿಗಳೂ ರಾಷ್ಟçದ ದೊಡ್ಡ ಶಕ್ತಿಯಾಗಿ ಬೆಳೆಯಬೇಕೆಂಬ ಆಶಯವನ್ನು ಹೊಂದಿದ್ದರು. ಪುತ್ತೂರಿನಲ್ಲಿ ಅಂಬಿಕಾ ಎನ್ನುವ 'ಮಾದರಿ' ಶಿಕ್ಷಣ ಸಂಸ್ಥೆಯ ನಿರ್ಮಾಣದ ಹಿಂದಿನ ಶಕ್ತಿಯಾಗಿದ್ದರು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ. ತಿಳಿಸಿದರು....







