Tuesday, May 21, 2024

ಸಂತಾಪ

ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಕಡಬ :ಬೈಕ್, ಮಿನಿ ಗೂಡ್ಸ್ ಟೆಂಪೋ ನಡುವೆ ಭೀಕರ ಅಪಘಾತ : ಪುತ್ತೂರಿನ ವಿವೇಕಾನಂದ ಕಾಲೇಜು ವಿದ್ಯಾರ್ಥಿ ಮೃತ್ಯು – ಕಹಳೆ ನ್ಯೂಸ್

ರಾಮಕುಂಜ : ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್(20ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶ್ರೀಜಿಸ್‌ರವರು ರಾಮಕುಂಜ ಶಾರದಾನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು : ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್(64) ಮಾ.1ರ ಶುಕ್ರವಾರ ಇಂದು ಮುಂಜಾನೆ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ತಾ| ಕರುವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ಗೆ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಮತ್ತು...
ದೆಹಲಿಸಂತಾಪಸುದ್ದಿ

ಹನಿಮೂನ್ ಮೂಡ್ ನಲ್ಲಿದ್ದ ನವದಂಪತಿಯ ದಾರುಣ ಅಂತ್ಯ : ಹೃದಯಾಘಾತಕ್ಕೆ ಬಲಿಯಾದ ಪತಿ : ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಪತ್ನಿ – ಕಹಳೆ ನ್ಯೂಸ್

ನವದೆಹಲಿ: ಹನಿಮೂನ್ ಮೂಡ್ ನಲ್ಲಿದ್ದ ನವದಂಪತಿ ದಾರುಣವಾಗಿ ಮೃತಪಟ್ಟ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ವಿಹಾರಕ್ಕೆಂದು ತೆರಳಿದ್ದ ದಂಪತಿಯಲ್ಲಿ ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ತಮ್ಮ ಅಪಾರ್ಟೆಂಟ್  ಕಟ್ಟಡದ 7ನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ. 2023 ನವೆಂಬರ್ 30 ರಂದು ಅಭಿಷೇಕ್(25) ಹಾಗೂ ಅಂಜಲಿ(23) ವಿವಾಹ ನಡೆದಿದೆ. ಬಳಿಕ ಇಬ್ಬರೂ ದೆಹಲಿಯಲ್ಲೇ ನೆಲೆಸಿದ್ದರು. ಸೋಮವಾರ ದಂಪತಿ ಜೊತೆಯಾಗಿ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಭಿಷೇಕ್...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಸುರತ್ಕಲ್ ಖಾಸಗಿ ಅನುದಾನಿತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ : ಪರೀಕ್ಷೆ ಮುಗಿಸಿ ನಾಪತ್ತೆಯಾದ ವಿದ್ಯಾರ್ಥಿಗಳ ಶವ ನದಿಯಲ್ಲಿ ಪತ್ತೆ ! – ಕಹಳೆ ನ್ಯೂಸ್

ಸುರತ್ಕಲ್: ಸುರತ್ಕಲ್ ಖಾಸಗಿ ಅನುದಾನಿತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ಮಂಗಳವಾರ ಎಸ್. ಎಸ್. ಎಲ್. ಸಿ. ಪರೀಕ್ಷೆ ಬರೆದ ಬಳಿಕ ಮನೆಗೆ ಮರಳದೆ ನಾಪತ್ತೆಯಾದ ಘಟನೆ ನಡೆದಿದ್ದು, ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿ ಕೊಪ್ಪಳ ಅಣೆಕಟ್ಟ ರೈಲ್ವೇ ಸೇತುವೆಯ ಕೆಳಭಾಗದ ನದಿಯಲ್ಲಿ ಪತ್ತೆಯಾಗಿದೆ. ಸುರತ್ಕಲ್ ಅಗರಮೇಲು ನಿವಾಸಿ ಯಶ್ವಿತ್ (15), ಹಳೆಯಂಗಡಿ ತೋಕೂರು ನಿವಾಸಿ ರಾಘವೇಂದ್ರ (15), ಗುಡ್ಡಕೊಪ್ಪ ನಿವಾಸಿ ನಿರೂಪ (15) ಮತ್ತು ಚಿತ್ರಾಪುರ ನಿವಾಸಿ ದೇವದಾಸ್ ಎಂಬವರ...
ಬೆಂಗಳೂರುರಾಜಕೀಯರಾಜ್ಯಸಂತಾಪಸುದ್ದಿ

ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಿಧನ – ಕಹಳೆ ನ್ಯೂಸ್

ಬೆಂಗಳೂರು, ಫೆ 25 : ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್​ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜಾ ವೆಂಕಟಪಟ್ಟ ನಾಯಕ ಅವರಿಗೆ ಕಿಡ್ನಿ ಸ್ಟೋನ್ ಆಗಿದ್ದು, ಆಪರೇಶನ್ ಸಹ ಮಾಡಲಾಗಿತ್ತು. ಕಳೆದ...
ದಕ್ಷಿಣ ಕನ್ನಡಮೂಡಬಿದಿರೆಸಂತಾಪಸುದ್ದಿ

ಮೂಡುಬಿದಿರೆ: ಬೈಲ ಕುರಲ್ ಖ್ಯಾತಿಯ “ಭಾಷಾ” ಇನ್ನಿಲ್ಲ – ಕಹಳೆ ನ್ಯೂಸ್

ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ನಾಟಕ ರಂಗದಲ್ಲಿ ವಿವಿಧ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ತುಳು ನಾಟಕ ಕಲಾವಿದ ಬೈರ ಕುರಲ್ ಖ್ಯಾತಿಯ "ಭಾಷಾ" ವಸಂತ್ ಶೆಟ್ಟಿ ತೋಡಾರು ಅವರು ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ. ತೋಡಾರು ಗಗನ್ ನಿವಾಸದ ಸುಂದರ ಶೆಟ್ಟಿ ಅವರ ಪುತ್ರ ವಸಂತ ಶೆಟ್ಟಿ(೫೨) ಕಳೆದ ಮೂರು ವರುಷಗಳಿಂದ ಅನಾರೋಗ್ಯವನ್ನು ಹೊಂದಿದ್ದರು. ಸುರೇಂದ್ರ ಕುಮಾರ್ ಕಲತ್ರಪಾದೆ ಅವರ ರಚನೆಯ ಅತ್ಯುತ್ತಮ ನಾಟಕ ಬೈರ ಕುರಲ್ ನಲ್ಲಿ "ಭಾಷಾ"...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

 ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ ನಿಧನ – ಕಹಳೆ ನ್ಯೂಸ್

ಮಂಗಳೂರು : ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ಮಂಗಳೂರಿನಲ್ಲಿ ನೆಲೆಸಿದ್ದರು. ತಮ್ಮ ಹದಿನೇಳರ ಹರೆಯದಲ್ಲಿ ಶಿಕ್ಷಕರಾಗಿ ಕೆಲಸಕ್ಕೆ ಸೇರಿದ ಇವರು ಇಂಥಿಯೋಪಿಯಾದಲ್ಲಿ ಒಂಬತ್ತು ವರ್ಷ ಸೇರಿದಂತೆ ಒಟ್ಟು 25 ವರ್ಷ ಇಂಗ್ಲಿಷ್ ಪ್ರಾಧ್ಯಾಪಕರಾಗಿ ದುಡಿದಿದ್ದರು. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ್ದ ಕೆ.ಟಿ.ಗಟ್ಟಿ ಅವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ...
ದಕ್ಷಿಣ ಕನ್ನಡಬೆಳ್ತಂಗಡಿಸಂತಾಪಸುದ್ದಿ

ಸಹಕಾರಿ ರತ್ನ, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ನಿರಂಜನ್‌ ಬಾವಂತಬೆಟ್ಟು ನಿಧನ ; ಸ್ವಯಂಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಸಂತಾಪ – ಕಹಳೆ ನ್ಯೂಸ್

ಉಪ್ಪಿನಂಗಡಿ/ಬೆಳ್ತಂಗಡಿ: ಹಿರಿಯ ಸಹಕಾರಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ (ಎಸ್‌ಸಿಡಿಸಿಸಿ ಬ್ಯಾಂಕ್‌) ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಒಕ್ಕೂಟದ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕರು, ಸಹಕಾರ ರತ್ನ ಬಿ. ನಿರಂಜನ್‌ ಬಾವಂತಬೆಟ್ಟು (76) ಅವರು ಫೆ. 12ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಬಾವಂತಬೆಟ್ಟು ನಿವಾಸಿಯಾಗಿರುವ ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರು 1987ರಿಂದ...
1 2 3 4 5 16
Page 3 of 16