Sunday, March 8, 2026

ಸಂತಾಪ

ಬೆಂಗಳೂರುರಾಜ್ಯಸಂತಾಪಸುದ್ದಿ

ಕರ್ನಾಟಕ ರಾಜ್ಯ ಸರಕಾರದ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಇಂದು ರಾತ್ರಿ 10.30 ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ....
ಉಡುಪಿಸಂತಾಪಸುದ್ದಿ

ಮಣಿಪಾಲದ ಶಿಲ್ಪಿ ಡಾ. ಟಿ ಎಮ್ ಎ ಪೈ ಅವರ ಹಿರಿಯ ಪುತ್ರ ಟಿ ಮೋಹನ್ ದಾಸ್ ಎಂ ಪೈ (89)ನಿಧನ – ಕಹಳೆ ನ್ಯೂಸ್

ಉಡುಪಿ, (ಜುಲೈ.31):  ಮಣಿಪಾಲದ ಶಿಲ್ಪಿ ಡಾ. ಟಿ ಎಮ್ ಎ ಪೈ ಅವರ ಹಿರಿಯ ಪುತ್ರ ಟಿ.ಮೋಹನ್​ ದಾಸ್ ಎಂ.  ಪೈ ಅವರು ನಿಧನರಾಗಿದ್ದಾರೆ. ಇಂದು(ಭಾನುವಾರ) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ  ಟಿ ಮೋಹನ್ ದಾಸ್ ಎಂ ಪೈ (89) ಸಾವನ್ನಪ್ಪಿದ್ದಾರೆ. ಎಂಜಿಎಂ ಕಾಲೇಜಿನಲ್ಲಿ ನಾಳೆ(ಆಗಸ್ಟ್ 1) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಡಾ ಟಿ ಎಂ ಎ ಪೈ ಫೌಂಡೇಶನ್ ಹಾಗೂ ಎಂಜಿಎಂ ಕಾಲೇಜ್ ಟ್ರಸ್ಟ್ ನ ಅಧ್ಯಕ್ಷರಾಗಿದ್ದರು...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಬೊಳುವಾರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪವರ್ ಪ್ಯಾಕ್ ಬ್ಯಾಟರಿ ಶಾಪ್ ನ ಮಾಲಕ ಕಿರಣ್ ಶೆಟ್ಟಿ ಹೃದಯಾಘಾತದಿಂದಾಗಿ ನಿಧನ – ಕಹಳೆ ನ್ಯೂಸ್

ಪುತ್ತೂರು: ಬೊಳುವಾರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪವರ್ ಪ್ಯಾಕ್ ಬ್ಯಾಟರಿ ಶಾಪ್ ನ ಮಾಲಕ ಕಿರಣ್ ಶೆಟ್ಟಿ (45) ರವರು ಜು.8 ರಂದು ಹೃದಯಾಘಾತದಿಂದಾಗಿ ನಿಧನರಾದರು. ಕಿರಣ್ ಶೆಟ್ಟಿ ರವರು ಪವರ್ ಪ್ಯಾಕ್ ಬ್ಯಾಟರಿ ಶಾಪ್ ನ ಮಾಲಕ ರಾಗಿದ್ದು, ಅವರು ಮೂಲತಃ ಕಲ್ಲಾರೆ ನಿವಾಸಿಯಾಗಿದ್ದು, ಪ್ರಸ್ತುತ ಬೈಪಾಸ್ ರಸ್ತೆಯಲ್ಲಿನ ಪ್ಲಾಟ್ ನಲ್ಲಿ ಹೆಂಡತಿ ಮಕ್ಕಳೊಂದಿಗೆ ವಾಸವಿದ್ದರು. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಸಂತಾಪಸುದ್ದಿ

ಮಂಗಳೂರು: ಕೆನರಾ ಹೈಸ್ಕೂಲ್ ‌ಅಸೋಸಿಯೇಶನ್ ಅಧ್ಯಕ್ಷ ಅಣ್ಣಪ್ಪ ಪೈ ವಿಧಿವಶ– ಕಹಳೆ ನ್ಯೂಸ್

ಮಂಗಳೂರು: ಕೆನರಾ ಹೈಸ್ಕೂಲ್ ‌ಅಸೋಸಿಯೇಶನ್ ಅಧ್ಯಕ್ಷ ಅಣ್ಣಪ್ಪ ಪೈ (74) ಅವರು ಬೆಂಗಳೂರಿನಲ್ಲಿ ನಿನ್ನೆ ದೈವಾಧೀನರಾಗಿದ್ದಾರೆ. ಸಾಹುಕಾರ್ ಬಾಬಾ ಪೈ ಮನೆತನದವರಾದ ಅಣ್ಣಪ್ಪ ಪೈ ರಾಘವೇಂದ್ರ ರಂಗ ಪೈ ಅವರ ಸುಪುತ್ರರಾಗಿದ್ದು ಖ್ಯಾತ ಸಂಸ್ಥೆ ಮಾಡರ್ನ್ ಕಿಚನ್ ಇದರ ಪಾಲುದಾರರಾಗಿ, ಪರೋಪಕಾರಿಯಾಗಿ ಮತ್ತು ಸಮಾಜದ ಸೇವಾ ಚಟುವಟಿಕೆಗಳಲ್ಲಿ ತೊಡಗಿ ಜನಪರ ಕಾಳಜಿಯನ್ನು ಹೊಂದಿದ್ದರು. ಅಷ್ಟೇ ಅಲ್ಲದೆ ಜಿಲ್ಲಾ ಸಣ್ಣ ಕೈಗಾರಿಕಾ ಅಸೋಸಿಯೇಶನ್ ಅಧ್ಯಕ್ಷರಾಗಿ, ರೋಟರಿ ಕ್ಲಬ್ ಅಧ್ಯಕ್ಷರಾಗಿ, ಮಾರ್ಡನ್ ಕಿಚನ್...
ಆರೋಗ್ಯಸಂತಾಪಸಿನಿಮಾಸುದ್ದಿ

ಕೋವಿಡ್ -19 ಸೋಂಕಿನಿಂದ ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ನಿಧನ – ಕಹಳೆ ನ್ಯೂಸ್

ಚೆನ್ನೈ, ಜೂ 29 : ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಅವರು ಬುಧವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋವಿಡ್ -19 ಸೋಂಕಿನಿಂದ ವಿದ್ಯಾಸಾಗರ್ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು. ತೀವ್ರ ಶ್ವಾಸಕೋಶ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾ ಸಾಗರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೀನಾ 2009 ರಲ್ಲಿ ಬೆಂಗಳೂರಿನ ಮೂಲದ ಉದ್ಯಮಿ ವಿದ್ಯಾಸಾಗರ್ ಅವರನ್ನು ವಿವಾಹವಾಗಿದ್ದು , ಇವರಿಗೆ 11...
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಬಂಟ್ವಾಳ – ಜ್ವರದಿಂದ ಬಳಲುತ್ತಿದ್ದ 6 ವರ್ಷದ ಬಾಲಕಿ ಮೃತ್ಯು..!– ಕಹಳೆ ನ್ಯೂಸ್

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಹನುಮಾನ್ ನಗರದ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6)ಮೃತ ಬಾಲಕಿ. ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದ ಆರಾಧ್ಯ ಆಚಾರ್ಯ ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದಳು, ಈಕೆಗೆ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಉಲ್ಬಣಗೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾಳೆ....
ಬಂಟ್ವಾಳಸಂತಾಪಸುದ್ದಿ

ನಿವೃತ್ತ ಶಿಕ್ಷಕಿ, ನೃತ್ಯ ನಿರ್ದೇಶಕಿ ಗುಣವತಿ ಎಂ ನಿಧನ – ಕಹಳೆ ನ್ಯೂಸ್

ಮೂಡುಬಿದಿರೆ : ಆಚಾರ್ಯ ಕೇರಿ ನಿವಾಸಿ, ನಿವೃತ್ತ ಶಿಕ್ಷಕಿ, ನೃತ್ಯ ನಿರ್ದೇಶಕಿ, ಗಾಯಕಿ ಗುಣವತಿ ಎಂ. (83) ಅವರು ಉಪ್ಪಿನಂಗಡಿಯಲ್ಲಿರುವ ಪುತ್ರಿಯ ಮನೆಯಲ್ಲಿ ಜೂ. 22ರಂದು ನಿಧನ ಹೊಂದಿದರು. ಮೃತರು ಪುತ್ರಿಯನ್ನು ಅಗಲಿದ್ದಾರೆ. 1960ರ ದಶಕದಲ್ಲಿ ಶಿಕ್ಷಕಿ ವೃತ್ತಿ ಆರಂಭಿಸಿದ್ದ ಅವರು ಹೊಸಬೆಟ್ಟು ಗ್ರಾಮದ ಹೆಗ್ಡೆಬೈಲುನಲ್ಲಿ ಹೊಸ ಶಾಲೆ ಸ್ಥಾಪನೆ, ಹೊಸಕಟ್ಟಡ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಬೆಳುವಾಯಿ ಮೈನ್, ಜ್ಯೋತಿನಗರ, ಮೂಡುಬಿದಿರೆ ಥರ್ಡ್ ಶಾಲೆಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ.ಬಿ ಶ್ರೀಧರ್ ಭಟ್ ನಿಧನ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ.ಬಿ ಶ್ರೀಧರ್ ಭಟ್ ಇಂದು ನಿಧನರಾಗಿದ್ದಾರೆ. ವಿವೇಕಾನಂದ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಅತ್ಯಂತ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು, ರಸಾಯನ ಶಾಶ್ತ್ರ ವಿಭಾಗದ ಮುಖ್ಯಸ್ಧರಾಗಿಯು ಕಾರ್ಯನಿರ್ವಹಿಸಿದ್ದರು. ಸರಳ ಹಾಗೂ ಉತ್ತಮ ವ್ಯಕ್ತಿತ್ವವನ್ನ ಹೊಂದಿದ ಶ್ರೀಧರ್ ಭಟ್ ಅವರ ನಿಧನ ಇವರ ಕುಟುಂಬದವರಿಗೆ ಹಾಗೂ ಬಂಧು ಮಿತ್ರರಿಗೆ ಆಘಾತವನ್ನ ಉಂಟುಮಾಡಿದ್ದು, ಕಂಬನಿ ಮಿಡಿದಿದ್ದಾರೆ. ಮೃತರು ಪತ್ನಿ ಸಾವಿತ್ರಿ ಭಟ್, ಪುತ್ರಿಯರಾದ ಸ್ಮಿತಾ ಭಟ್ ಹಾಗೂ ಸ್ವಾತಿ...
1 28 29 30 31 32 36
Page 30 of 36