KGF ಚಾಚಾ ಖ್ಯಾತಿಯ ಹರೀಶ್ ರಾಯ್ ಇನ್ನಿಲ್ಲ – ಕಹಳೆ ನ್ಯೂಸ್
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಇಂದು ನಿಧನ ಹೊಂದಿದ್ದಾರೆ. ಹಲವು ವರ್ಷಗಳಿಂದ ಕ್ಯಾನ್ಸರ್‌ನೊಂದಿಗೆ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ‘ಓಂ, ನಲ್ಲ, ಕೆಜಿಎಫ್, ಕೆಜಿಎಫ್ 2’ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಹರೀಶ್ ರಾಯ್ ಅವರಿಗೆ ಥೈರಾಯ್ಡ್ ಕ್ಯಾನ್ಸರ್ ಇತ್ತು. ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ಹದಗೆಟ್ಟಿತ್ತು. ಕಳೆದ ಕೆಲ ದಿನಗಳ...







