ಡಿಕೆಶಿಗೆ ಹಾಸನಾಂಬೆ ಮಹಾಪ್ರಸಾದ ; ಪೂಜೆ ವೇಳೆ ಬಲಗಡೆ ಹೂವು ವರ ನೀಡಿದ ದೇವಿ-ಕಹಳೆ ನ್ಯೂಸ್
ಹಾಸನ: ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಗೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಹಾಸನಾಂಬೆ ಸನ್ನಿಧಿಯಲ್ಲಿ ಮಹಾಪ್ರಸಾದ ಸಿಕ್ಕಿದೆ. ಮಂಗಳವಾರ ರಾತ್ರಿ ಪತ್ನಿಯೊಂದಿಗೆ ಹಾಸನಾಂಬೆ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಡಿಸಿಎಂಗೆ ವಿಜಯೀ ಶ್ರೇಯಸ್ಸು ಲಭಿಸಲೆಂದು ನಾರಾಯಣಿ ನಮಸ್ಕಾರ ಮಂತ್ರದ ಮೂಲಕ ಪೂಜೆ. ಸಲ್ಲಿಸಲಾಯಿತು. ಸುಮಾರು ಐದು ನಿಮಿಷ ದುರ್ಗಾ ಸಪ್ತಸತಿಯ 11ನೇ ಅಧ್ಯಾಯದ ನಾರಾಯಣಿ ನಮಸ್ಕಾರ ಮಂತ್ರ ಹೇಳಿ ಅರ್ಚಕರು ಪೂಜೆ...







