ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ ; 5ಕ್ಕೂ ಹೆಚ್ಚು ಜನ ನಾಪತ್ತೆ, ಕಟ್ಟಡಗಳು ನೆಲಸಮ-ಕಹಳೆ ನ್ಯೂಸ್
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿಯಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದ್ದು, 5ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಚಮೋಲಿ ಜಿಲ್ಲೆಯ ನಂದಾ ನಗರದಲ್ಲಿ ಬುಧವಾರ (ಸೆ.17) ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಮೇಘಸ್ಫೋಟ ಸಂಭವಿಸಿದೆ. ಭಾರೀ ಪ್ರಮಾಣದ ನೀರು ಹರಿದು ಬಂದಿದ್ದು, 6 ಕಟ್ಟಡಗಳು ನೆಲಸಮಗೊಂಡಿವೆ. ಇನ್ನೂ 5ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಸದ್ಯ ಸ್ಥಳದಲ್ಲಿ ಎಸ್ಡಿಆರ್ಎಫ್, ಎನ್ಡಿಆರ್ಎಫ್ ಮತ್ತು ಲೋಕೋಪಯೋಗಿ ಇಲಾಖೆಯ ತಂಡಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಜೊತೆಗೆ...







