ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಉಡುಪಿ ಫಸ್ಟ್, ದಕ್ಷಿಣ ಕನ್ನಡ ಸೆಕೆಂಡ್ – ಕಹಳೆ ನ್ಯೂಸ್
ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (Second PUC) ಇಂದು ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,37,805 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (73.45%) ಪಡೆದುಕೊಂಡಿದೆ....







